ADVERTISEMENT

ಬೆಳೆ ಚೆಲ್ಲಿ ಧರಣಿ; ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2018, 17:41 IST
Last Updated 2 ಡಿಸೆಂಬರ್ 2018, 17:41 IST
ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ನಾಲ್ಕು ದಿನಗಳಿಂದ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಭಾನುವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು ಪ್ರತಿಭಟನಾಕಾರರು, ಕಾಡಾನೆ ಹಾನಿ ಮಾಡಿರುವ ಬೆಳೆಯನ್ನು ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಡಿ ಪ್ರತಿಭಟನೆ ನಡೆಸಿದರು

ಸಕಲೇಶಪುರ: ಆಲೂರು ಹಾಗೂ ಸಕಲೇಶಪುರ ತಾಲ್ಲೂಕುಗಳಲ್ಲಿ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು 4 ದಿನಗಳಿಂದ ಬಾಳ್ಳುಪೇಟೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಭಾನುವಾರ ತೀವ್ರ ಸ್ವರೂಪ ಪಡೆದುಕೊಂಡಿತು.

ಪ್ರತಿಭಟನಾಕಾರರು ಅಂಗಡಿಗಳನ್ನು ಬಂದ್‌ ಮಾಡಿ, ನಾಶವಾದ ಬೆಳೆಯನ್ನು ಹೆದ್ದಾರಿಗೆ ಚೆಲ್ಲಿ ರಸ್ತೆ ತಡೆ ನಡೆಸಿದರು.

ಧರಣಿ ಕುಳಿತ ಶಾಸಕ: ರೈತರು, ಬೆಳೆಗಾರರ ಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಶಾಸಕ ಎಚ್‍.ಕೆ.ಕುಮಾರಸ್ವಾಮಿ, ಕಾಂಗ್ರೆಸ್‍ ಮುಖಂಡ ಬಿ.ಶಿವರಾಂ, ನಿವೃತ್ತ ಅಧಿಕಾರಿ ಸಿದ್ದಯ್ಯ ಸೇರಿ ಹಲವರು ಧರಣಿ ಕುಳಿತರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.