ADVERTISEMENT

ಪಿಎಸ್ಐ ಪರೀಕ್ಷೆ: ಶೇ 64.5ರಷ್ಟು ಹಾಜರು

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 16:30 IST
Last Updated 3 ಅಕ್ಟೋಬರ್ 2024, 16:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) 402 ಹುದ್ದೆಗಳ ನೇಮಕಾತಿಗೆ ರಾಜ್ಯದ ಆರು ಜಿಲ್ಲೆಗಳ 163 ಕೇಂದ್ರಗಳಲ್ಲಿ ಗುರುವಾರ ಸುಸೂತ್ರವಾಗಿ ಪರೀಕ್ಷೆ ನಡೆಯಿತು.

ಒಟ್ಟು 66,990 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಹರಾಗಿದ್ದರು. ಅವರಲ್ಲಿ 56,528 ಮಂದಿ ಮಾತ್ರ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದರು. ಈ ಪೈಕಿ, 43,250 ಅಭ್ಯರ್ಥಿಗಳು ಪರೀಕ್ಷೆಗೆ (ಶೇ 64.5ರಷ್ಟು) ಹಾಜರಾಗಿದ್ದರು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದರು.

ADVERTISEMENT

ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ ಮತ್ತು ದಾವಣಗೆರೆ ನಗರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ಬಿಗಿ ಭದ್ರತೆಯಲ್ಲಿ ಪರೀಕ್ಷೆ ನಡೆಸಲಾಯಿತು. ಎಲ್ಲ ಕೇಂದ್ರಗಳಲ್ಲೂ ಜಾಮರ್ ಇತ್ತು. ಆದರೆ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಾತ್ರ ಎಲ್ಲ ಪರೀಕ್ಷಾ ಕೊಠಡಿಗಳಿಗೆ ಒಂದೊಂದು ಜಾಮರ್ ಹಾಕಿ, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು ಕಾರ್ಯನಿರ್ವಹಿಸದಂತೆ ಮಾಡಲಾಗಿತ್ತು ಎಂದರು.

ಕಮಾಂಡ್ ಕೇಂದ್ರದಲ್ಲಿ ನಿಗಾ
‘ಎಲ್ಲ ಪರೀಕ್ಷಾ ಕೇಂದ್ರಗಳ‌ ಮೇಲೆ ನಿಗಾ‌ ಇಡಲು ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ, ಕೆಇಎ ಕೇಂದ್ರ ಕಚೇರಿಯಲ್ಲಿಯೂ ಕಮಾಂಡ್ ಸೆಂಟರ್ ಕಾರ್ಯನಿರ್ವಹಿಸಿತು. ಪೊಲೀಸ್ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಶರತ್ ಚಂದ್ರ, ಡಿಐಜಿ ಸುಧೀಂದ್ರ ಕುಮಾರ್ ರೆಡ್ಡಿ ಅವರು ಕಮಾಂಡ್ ಸೆಂಟರ್‌ನಲ್ಲಿ ಕುಳಿತು ಪರೀಕ್ಷಾ ವ್ಯವಸ್ಥೆಯನ್ನು ವೀಕ್ಷಿಸಿದರು’ ಎಂದು ಪ್ರಸನ್ನ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.