ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ: ವಿಚಾರಣಾ ವರದಿ ಸಲ್ಲಿಸಿದ ಆಯೋಗ

​ಪ್ರಜಾವಾಣಿ ವಾರ್ತೆ
Published 22 ಜನವರಿ 2024, 9:35 IST
Last Updated 22 ಜನವರಿ 2024, 9:35 IST
   

ಬೆಂಗಳೂರು: ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ 545 ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ವಿಚಾರಣೆ ನಡೆಸಿರುವ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಆಯೋಗ ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿತು.

2023ರ ಅಕ್ಟೋಬರ್‌ನಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿರುವುದು ಕೆಲವು ದಿನಗಳ ಬಳಿಕ ಬಹಿರಂಗವಾಗಿತ್ತು. ತನಿಖೆ ನಡೆಸಿದ್ದ ಸಿಐಡಿ ಪೊಲೀಸರು, 110 ಜನರನ್ನು ಬಂಧಿಸಿದ್ದರು.

2023ರ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಈ ಹಗರಣದ ವಿಚಾರಣೆಗೆ ನ್ಯಾ. ಬಿ. ವೀರಪ್ಪ ನೇತೃತ್ವದ ಆಯೋಗವನ್ನು ನೇಮಿಸಲಾಗಿತ್ತು. ವಿಸ್ತೃತವಾದ ವಿಚಾರಣೆ ನಡೆಸಿರುವ ಆಯೋಗವು ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.

ADVERTISEMENT

ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌, ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜ್‌ ಮತ್ತು ನಸೀರ್‌ ಅಹಮದ್‌ ವರದಿ ಸಲ್ಲಿಸುವ ವೇಳೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.