ADVERTISEMENT

ದ್ವಿತೀಯ ಪಿಯು ಅಂಕಪಟ್ಟಿ ಲಭ್ಯ

​ಪ್ರಜಾವಾಣಿ ವಾರ್ತೆ
Published 3 ಜುಲೈ 2023, 20:49 IST
Last Updated 3 ಜುಲೈ 2023, 20:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ದ್ವಿತೀಯ ಪಿಯು ತೇರ್ಗಡೆಯಾದ ವಿದ್ಯಾರ್ಥಿಗಳು ನಾಡ್‌-ಡಿಜಿಲಾಕರ್‌ನಲ್ಲಿ (ನ್ಯಾಶನಲ್‌ ಅಕಾಡೆಮಿಕ್‌ ಡಿಪಾಸಿಟರಿ) ತಮ್ಮ ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು. 

2022–23ನೇ ಸಾಲಿನಲ್ಲಿ ತೇರ್ಗಡೆಯಾದ 5.24 ಲಕ್ಷ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿಲಾಕರ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ವಿದ್ಯಾರ್ಥಿಗಳು https://nad.dijilocker.gov.in ಮೂಲಕ ತಮ್ಮ ಆಧಾರ್ ಸಂಖ್ಯೆ ನಮೂದಿಸಬೇಕು. ನೋಂದಾಯಿತ ಮೊಬೈಲ್‌ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ, ಲಾಗಿನ್‌ ಆದ ನಂತರ ಮುಖ್ಯ ಪರೀಕ್ಷೆಯ ನೋಂದಣಿ ಸಂಖ್ಯೆ, ಪರೀಕ್ಷೆ ತೇರ್ಗಡೆಯಾದ ಅವಧಿ ನಮೂಸಿದರೆ ಅಂಕಪಟ್ಟಿ ಸಿಗುತ್ತದೆ. ಅದನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೇಳಿದೆ.‌

ಮೊಬೈಲ್‌ನಲ್ಲೂ ಡಿಜಿಲಾಕರ್ ಆ್ಯಪ್‌ ಬಳಸಿ ಅಂಕಪಟ್ಟಿ ಪಡೆಯಬಹುದು. ಅಂಕಪಟ್ಟಿಗಳ ಮುದ್ರಣ ಕಾರ್ಯವೂ ಪ್ರಗತಿಯಲ್ಲಿದ್ದು, ಆಯಾ ಕಾಲೇಜುಗಳಿಗೆ ಶೀಘ್ರ ಸರಬರಾಜು ಮಾಡಲಾ
ಗುವುದು ಎಂದು ಮಂಡಳಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.