ADVERTISEMENT

ಏ.29ರಿಂದ ಪಿಯು ಪರೀಕ್ಷೆ–2: 1.60 ಲಕ್ಷ ವಿದ್ಯಾರ್ಥಿಗಳು ನೋಂದಣಿ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2024, 15:28 IST
Last Updated 20 ಏಪ್ರಿಲ್ 2024, 15:28 IST
<div class="paragraphs"><p> ದ್ವಿತೀಯ ಪಿಯು ಪರೀಕ್ಷೆ ನೋಂದಣಿ ಸಂಖ್ಯೆ ಬರೆಯುವಲ್ಲಿ ನಿರತರಾಗಿರುವ ಉಪನ್ಯಾಸಕರು &nbsp;</p></div>

ದ್ವಿತೀಯ ಪಿಯು ಪರೀಕ್ಷೆ ನೋಂದಣಿ ಸಂಖ್ಯೆ ಬರೆಯುವಲ್ಲಿ ನಿರತರಾಗಿರುವ ಉಪನ್ಯಾಸಕರು  

   

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ–2 ಏ.29ರಿಂದ ಆರಂಭವಾಗಲಿದ್ದು, 1.60 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.

ಫಲಿತಾಂಶ ಉತ್ತಮಪಡಿಸಿಕೊಳ್ಳಲು ವಿಜ್ಞಾನ ವಿಷಯದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಸಿಇಟಿ ಅಂಕದ ಜತೆಗೆ, ದ್ವಿತೀಯ ಪಿಯು ಅಂಕಗಳನ್ನೂ ಪರಿಗಣಿಸಲಾಗುತ್ತದೆ.

ADVERTISEMENT

ಮೂರು ಪರೀಕ್ಷೆಗಳಲ್ಲಿ ಯಾವುದರಲ್ಲಿ ಹೆಚ್ಚಿನ ಅಂಕಗಳು ಬರುತ್ತವೆಯೋ, ಆ ಅಂಕಗಳನ್ನೇ ಉಳಿಸಿಕೊಳ್ಳಲು ಅವಕಾಶ ಇರುವುದರಿಂದ ವಿಜ್ಞಾನ ವಿಷಯದ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಎರಡನೇ ಪರೀಕ್ಷೆ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ (ಕೆಎಸ್‌ಇಎಬಿ) ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರತಿ ವರ್ಷ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಲ್ಲಿ ಶೇ 80ರಷ್ಟು ವಿದ್ಯಾರ್ಥಿಗಳು ತೇರ್ಗಡೆಗಾಗಿ ಪೂರಕ ಪರೀಕ್ಷೆ ತೆಗೆದುಕೊಳ್ಳುತ್ತಿದ್ದರು. ಇದೇ ಮೊದಲ ಬಾರಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಜತೆಗೆ, ತೇರ್ಗಡೆಯಾದವರ ಫಲಿತಾಂಶ ಉತ್ತಮಪಡಿಸಿಕೊಳ್ಳುವುದಕ್ಕಾಗಿ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪ್ರಸಕ್ತ ವರ್ಷ 1.28 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.