ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ–3 ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 75,466 ವಿದ್ಯಾರ್ಥಿಗಳಲ್ಲಿ 17,911 ಮಂದಿ (ಶೇ 23.73) ತೇರ್ಗಡೆಯಾಗಿದ್ದಾರೆ.
44,027 ಬಾಲಕರಲ್ಲಿ 9,531 (ಶೇ 21.65) ಹಾಗೂ 31,439 ಬಾಲಕಿಯರಲ್ಲಿ 8,380 (ಶೇ 26.65) ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶೇ 27.06, ವಾಣಿಜ್ಯದಲ್ಲಿ ಶೇ 23.58 ಹಾಗೂ ಕಲಾ ವಿಭಾಗದಲ್ಲಿ ಶೇ 21.71ರಷ್ಟು ಫಲಿತಾಂಶ ಬಂದಿದೆ.
ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಜುಲೈ 24ರವರೆಗೆ ಅವಕಾಶ ನೀಡಲಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಜುಲೈ 21ರ ಒಳಗೆ ಅರ್ಜಿ ಸಲ್ಲಿಸಬೇಕು. 18ರಿಂದ 22ರವರೆಗೆ ಛಾಯಾ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇದೇ ಮೊದಲ ಬಾರಿ ಆರಂಭಿಸಿದ್ದ ಮೂರು ಪರೀಕ್ಷೆಗಳು ಪೂರ್ಣಗೊಂಡಿದ್ದು, ಮೂರು ಪರೀಕ್ಷೆಗಳಲ್ಲಿ ಯಾವುದರಲ್ಲಿ ವಿದ್ಯಾರ್ಥಿಗಳು ಅಧಿಕ ಅಂಕ ಪಡೆದಿರುತ್ತಾರೋ ಅದೇ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ (ಸಿಇಟಿ) ಪರಿಗಣಿಸಲಿದೆ. ಎರಡು ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಮೂರನೆಯ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಿಟಿಇ ರ್‍ಯಾಂಕಿಂಗ್ ಪಡೆಯಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.