ADVERTISEMENT

ಪ್ರಶ್ನೆ ಪತ್ರಿಕೆ ಸೋರಿಕೆ | ಸುನಿಲ್‌ಕುಮಾರ್ ಮರು ನೇಮಕ: ಕೆಎಟಿ ಆದೇಶ ಪುರಸ್ಕೃತ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2024, 15:35 IST
Last Updated 29 ಏಪ್ರಿಲ್ 2024, 15:35 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: 2012ರಲ್ಲಿ ನಡೆದಿದ್ದ ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸೇವೆಯಿಂದ ವಜಾಗೊಂಡಿದ್ದ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಎಚ್.ಎಸ್.ಸುನಿಲ್‌ಕುಮಾರ್ ಮರು ನೇಮಕಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಕೆಎಟಿ ಆದೇಶ ಪ್ರಶ್ನಿಸಿ ರಾಜ್ಯ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಖಜಾನೆ ನಿರ್ದೇಶನಾಲಯದ ನಿರ್ದೇಶಕ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ.

ADVERTISEMENT

ಪ್ರಕರಣವೇನು?: ಸುನಿಲ್‌ ಕುಮಾರ್ ಕಡೂರಿನ ಉಪ ಖಜಾನೆಯಲ್ಲಿ ಎಸ್‌ಡಿಎ ಆಗಿ ಕೆಲಸ ಮಾಡುತ್ತಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದಡಿ ಪೊಲೀಸರು ಅವರನ್ನು ಬಂಧಿಸಿದ್ದರು. ಈ ಸಂಬಂಧ ಶಿಸ್ತು ಪ್ರಾಧಿಕಾರ ಮತ್ತು ಸರ್ಕಾರ ನೇಮಿಸಿದ್ದ ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಸಮಿತಿ ವರದಿ ಆಧರಿಸಿ ಅವರನ್ನು 2015ರ ಅಕ್ಟೋಬರ್ 15ರಂದು ಸೇವೆಯಿಂದ ವಜಾಗೊಳಿಸಲಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.