ಬೆಂಗಳೂರು: ರಾಜ್ಯದಲ್ಲಿ 7 ಅಥವಾ 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ತಿಳಿಸಿದರು.
ಪಬ್ಲಿಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಅವಕಾಶವೂ ಇದೆ. 5 ರಿಂದ 8 ನೇ ತರಗತಿವರೆಗಿನ ಅವಧಿಯಲ್ಲಿ ಉತ್ತಮ ನಿರ್ವಹಣೆ ತೋರದ ವಿದ್ಯಾರ್ಥಿಗಳನ್ನು ಎರಡು ಬಾರಿ ಅನುತ್ತೀರ್ಣಗೊಳಿಸಬಹುದಾಗಿದೆ. ಈ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.