ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ದಾಖಲಾತಿ ದಿನಾಂಕವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತೊಮ್ಮೆ ವಿಸ್ತರಿಸಿದೆ.
ಪ್ರಥಮ ಪಿಯುಸಿಗೆ ಅ.27 ಹಾಗೂ ದ್ವಿತೀಯ ಪಿಯುಸಿ ದಾಖಲಾತಿಗೆ ನ.13ರವರೆಗೆ ಅವಕಾಶ ನೀಡಲಾಗಿದೆ.
ವಾರ್ಷಿಕ ಪರೀಕ್ಷೆ, ಪೂರಕ ಪರೀಕ್ಷೆ ಮತ್ತು ಮರುಮೌಲ್ಯಮಾಪನದ ನಂತರ ಉತ್ತೀರ್ಣರಾದವರ ಅನುಕೂಲಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಲಾಖೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.