ADVERTISEMENT

ಪಿಯು ಮೌಲ್ಯಮಾಪನ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 28 ಜನವರಿ 2020, 20:00 IST
Last Updated 28 ಜನವರಿ 2020, 20:00 IST
   

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕಾರ ಮಾಡಲುರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ನಿರ್ಧರಿಸಿದೆ.

ಸಂಘದಅಧ್ಯಕ್ಷ ತಿಮ್ಮಯ್ಯ ಪುರ್ಲೆಮಂಗಳವಾರ ಮಾತನಾಡಿ, ‘ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ ವೇತನ ತಾರತಮ್ಯ ಸರಿಪಡಿಸಿ, ಎರಡನೇ ಹೆಚ್ಚುವರಿ ವೇತನ ಬಡ್ತಿ ಮಂಜೂರು ಮಾಡುವುದೂ ಸೇರಿ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಒಮ್ಮೆ ಪ್ರತಿಭಟನೆ ನಡೆಸಲಾಗಿದೆ. ಆದರೂ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸಿಲ್ಲ’ ಎಂದು ದೂರಿದರು.

‘ಮೌಲ್ಯಮಾಪನ ಬಹಿಷ್ಕರಿಸಲು ಉಪನ್ಯಾಸಕರೆಲ್ಲ ನಿರ್ಧರಿಸಿದ್ದು, ಇದಕ್ಕೆ ಪೂರ್ವಭಾವಿಯಾಗಿಎರಡನೇ ಹಂತದಲ್ಲಿ ಜ. 30ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸಲಾಗುತ್ತಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.