ADVERTISEMENT

ಇಂದು ಪಲ್ಸ್‌ ಪೋಲಿಯೊ: 62.85 ಲಕ್ಷ ಮಕ್ಕಳಿಗೆ ಲಸಿಕೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2024, 0:00 IST
Last Updated 3 ಮಾರ್ಚ್ 2024, 0:00 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯದಾದ್ಯಂತ ಭಾನುವಾರ (ಮಾ.3) ಪಲ್ಸ್ ಪೋಲಿಯೊ ಹನಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.85 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ.

ದೇಶವು ಪೋಲಿಯೊ ಮುಕ್ತ ರಾಷ್ಟ್ರವಾಗಿದೆ. ಇದು ಮಹತ್ತರವಾದ ಸಾಧನೆಯಾದರೂ ಈ ಸಮಸ್ಯೆ ಜಗತ್ತಿನ ವಿವಿಧೆಡೆ ಮಕ್ಕಳನ್ನು ಬಾಧಿಸುತ್ತಿದೆ. ಇದು ಭಾರತದ ಆತಂಕಕ್ಕೆ ಕಾರಣವಾಗಿದೆ. ವೈದ್ಯಕೀಯ ತಜ್ಞರ ಶಿಫಾರಸಿನ ಅನ್ವಯ ದೇಶದಲ್ಲಿ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೊ ಹನಿ ಹಾಕಲಾಗುತ್ತಿದೆ. ರಾಜ್ಯದಲ್ಲಿ ಪೋಲಿಯೊ ಹನಿ ವಿತರಣೆಗೆ 33,712 ಬೂತ್‌ಗಳನ್ನು ಗುರುತಿಸಲಾಗಿದೆ. 963 ಸಂಚಾರಿ ತಂಡಗಳು ರೈಲು ನಿಲ್ದಾಣ, ಬಸ್‌ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ. ಈ ಕಾರ್ಯಕ್ರಮಕ್ಕೆ 1.11 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

ADVERTISEMENT

ಐದು ವರ್ಷದೊಳಗಿನ ಎಲ್ಲ ಮಕ್ಕಳೂ ಲಸಿಕೆ ಪಡೆದುಕೊಳ್ಳಬೇಕು. ಈ ಲಸಿಕೆಯು ಸಂಪೂರ್ಣ ಸುರಕ್ಷಿತವಾಗಿದ್ದು, ವದಂತಿಗಳಿಗೆ ಕಿವಿಗೊಡಬಾರದು. ಪೋಲಿಯೊ ವಿರುದ್ಧದ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು. ರಾಜ್ಯದ ಎಲ್ಲ ಆಸ್ಪತ್ರೆಗಳು, ರೈಲು ನಿಲ್ದಾಣ, ಮೆಟ್ರೊ ನಿಲ್ದಾಣ, ವಿಮಾನ ನಿಲ್ದಾಣ, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದೆ.

ಹೆಚ್ಚಿನ ಮಾಹಿತಿಗೆ ಹತ್ತಿರದ ಆರೋಗ್ಯ ಕೇಂದ್ರವನ್ನು ಭೇಟಿ ಮಾಡಬಹುದು ಅಥವಾ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಬಹುದು. ಹತ್ತಿರದ ಪೋಲಿಯೊ ಬೂತ್‌ಗಳನ್ನು ಗುರುತಿಸಲು ‘Nearby Vaccination Centre Karnataka’ ಆ್ಯಂಡ್ರಾಯ್ಡ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.