ADVERTISEMENT

ಪುನೀತ್ ನಡೆಸುತ್ತಿದ್ದ ಶಕ್ತಿಧಾಮಕ್ಕೆ ಕೈಲಾದ ಸಹಾಯ ಮಾಡುತ್ತೇನೆ: ರೇಣುಕಾಚಾರ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ನವೆಂಬರ್ 2021, 11:53 IST
Last Updated 5 ನವೆಂಬರ್ 2021, 11:53 IST
ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಕುಟುಂಬ ಸಮೇತರಾಗಿ ಶುಕ್ರವಾರ ಭೇಟಿ ನೀಡಿ ನಮನ ಸಲ್ಲಿಸಿದರು.
ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಕುಟುಂಬ ಸಮೇತರಾಗಿ ಶುಕ್ರವಾರ ಭೇಟಿ ನೀಡಿ ನಮನ ಸಲ್ಲಿಸಿದರು.   

ಬೆಂಗಳೂರು: ನಗರದ ಕಂಠೀರವ ಸ್ಟುಡಿಯೊದಲ್ಲಿರುವ ನಟ ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಕುಟುಂಬ ಸಮೇತರಾಗಿ ಶುಕ್ರವಾರ ಭೇಟಿ ನೀಡಿ ನಮನ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಚಾರ್ಯ, ‘ನಟ ಪುನೀತ್ ರಾಜ್ ಕುಮಾರ್‌ ಅವರು ನಮ್ಮನ್ನು ಅಗಲಿ ಇಂದಿಗೆ 8 ದಿನಗಳಾಯಿತು. ಅವರ ಅಕಾಲಿಕ ನಿಧನದಿಂದ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ನಾಡಿಗೆ ತುಂಬಲಾರದ ನಷ್ಟವಾಗಿದೆ. ‘ಅಪ್ಪು’ ಸಾಮಾಜಿಕ ಕಳಕಳಿಯ ಚಿತ್ರಗಳು ನಮಗೆ ಇಷ್ಟವಾಗಿವೆ. ಅವರ ಸೇವೆ ಅಪಾರವಾದದ್ದು, ಹಳ್ಳಿ, ಹಳ್ಳಿಗಳಲ್ಲಿ ಗಲ್ಲಿ, ಗಲ್ಲಿಗಳಲ್ಲಿ ಅಭಿಮಾನಿಗಳು ಗೌರವ ಸಲ್ಲಿಸಿರುವುದಕ್ಕೆ ಇದಕ್ಕೆ ಸಾಕ್ಷಿ’ ಎಂದರು.

‘ಪುನೀತ್ ರಾಜ್​​ಕುಮಾರ್ ಅವರು ಮೈಸೂರಿನಲ್ಲಿ ನಡೆಸುತ್ತಿದ್ದ ಶಕ್ತಿಧಾಮದಲ್ಲಿ ಸಾವಿರಾರು ಮಕ್ಕಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ. ಶಕ್ತಿಧಾಮಕ್ಕೆ ನಾನು ನನ್ನ ಕೈಲಾದ ಸೇವೆ ಮಾಡಲು ಬಯಸುತ್ತೇನೆ. ಆ ಬಗ್ಗೆ ಅಪ್ಪು ಕುಟುಂಬದವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದು ಹೇಳಿದರು.

ADVERTISEMENT

ನಟ ಪುನೀತ್‌ ರಾಜ್‌ಕುಮಾರ್‌ ಅಕಾಲಿಕ ನಿಧನ ಕನ್ನಡ ಚಿತ್ರರಂಗವನ್ನು ಚಿಂತೆಗೀಡು ಮಾಡಿದೆ. ‘ಅಪ್ಪು’ ಚಿತ್ರರಂಗದ ನಟ – ನಟಿಯರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಹಾಗಾಗಿ ಅವರ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ. ಇತ್ತ ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೊಗೆ ಭೇಟಿ ನೀಡಿ ಪುನೀತ್‌ ಸಮಾಧಿಗೆ ನಮನ ಸಲ್ಲಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.