ADVERTISEMENT

ಕನ್ನಡಿಗರ ತೆರಿಗೆ ಹಣ ರಾಹುಲ್ ಗಾಂಧಿ ಜೇಬಿಗೆ– ಆರ್‌ ಅಶೋಕ್‌ ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಫೆಬ್ರುವರಿ 2024, 6:16 IST
Last Updated 20 ಫೆಬ್ರುವರಿ 2024, 6:16 IST
ಆರ್‌. ಅಶೋಕ್‌
ಆರ್‌. ಅಶೋಕ್‌   

ಬೆಂಗಳೂರು: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರವಾಗಿ ₹15 ಲಕ್ಷವನ್ನು ಮಂಜೂರು ಮಾಡಿದ್ದಕ್ಕೆ ವಿಪಕ್ಷ ನಾಯಕರು ಕಿಡಿಕಾರಿದ್ದಾರೆ. 

ಹಣ ಬಿಡುಗಡೆ ಮಾಡಿರುವುದರ ವಿರುದ್ಧ ‌ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌, ‘ಕನ್ನಡಿಗರ ತೆರಿಗೆ ಹಣವನ್ನ ಕೇರಳ ಸಂಸದರಾದ ರಾಹುಲ್‌ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್‌ ಅವರ ಅಣತಿಯಂತೆ ಬಿಡುಗಡೆ ಮಾಡಲು ಕರ್ನಾಟಕವೇನು ಕಾಂಗ್ರೆಸ್‌ ಪಕ್ಷದ ಆಸ್ತಿ ಅಂದುಕೊಂಡಿದ್ದೀರಾ, ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೇ? ಎಂದು ಪ್ರಶ್ನೆ ಮಾಡಿದ್ದಾರೆ.

ಕನ್ನಡಿಗರ ತೆರಿಗೆ ರಾಹುಲ್ ಗಾಂಧಿ ಜೇಬಿಗೆ ಎಂದು ಕುಟುಕಿದ ಅಶೋಕ್‌, ಸಿಎಂ ಸಿದ್ದರಾಮಯ್ಯನವರೇ, ಇದು ‘ನಮ್ಮ ತೆರಿಗೆ, ನಮ್ಮ ಹಕ್ಕು’ ಅಂತ ನಿಮ್ಮ ಪಕ್ಷದ ಹೈಕಮಾಂಡ್ ನಾಯಕರ ಬಳಿ ‘ಧೈರ್ಯವಾಗಿ ಪ್ರಶ್ನಿಸಲು’ ನಿಮ್ಮ ಸಚಿವರಿಗೆ ತಾಕತ್ತಿಲ್ಲವೇ? ಎಂದು ಗುಡುಗಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.