ADVERTISEMENT

ರೇಬಿಸ್ ಅಧಿಸೂಚಿತ ಕಾಯಿಲೆ: ಘೋಷಣೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 16:00 IST
Last Updated 7 ಡಿಸೆಂಬರ್ 2022, 16:00 IST

ಬೆಂಗಳೂರು: ರೇಬಿಸ್ ಸೋಂಕಿತ ನಾಯಿಗಳ ಕಡಿತದಿಂದ ಬರುವ ರೇಬಿಸ್ ಕಾಯಿಲೆಯನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ‘ಅಧಿಸೂಚಿತ ಕಾಯಿಲೆ’ ಎಂದು ಘೋಷಿಸಿ ಆದೇಶಿಸಲಾಗಿದೆ.

ಈ ಬಗ್ಗೆ ಆರೋಗ್ಯ ಇಲಾಖೆ ಅಧಿಸೂಚನೆ ಹೊರಡಿಸಿದೆ. ‘ಈ ಕಾಯಿಲೆ ಹೆಚ್ಚಿನ ಸಾವಿನ ಪ್ರಮಾಣವನ್ನು ಹೊಂದಿದೆ. ಅತ್ಯಂತ ನೋವಿನ ಸಾವುಗಳಿಗೆ ಕಾರಣವಾಗುತ್ತಿದೆ. ರೇಬಿಸ್ ಕಣ್ಗಾವಲು ಬಲಪಡಿಸಲು, ಮಾನವ ಮತ್ತು ಪಶುವೈದ್ಯಕೀಯ ವಲಯದಲ್ಲಿ ಕೈಗೊಳ್ಳಬೇಕಾದ ಸಾರ್ವಜನಿಕ ಆರೋಗ್ಯ ಕ್ರಮಗಳಿಗೆ ಆದ್ಯತೆ ನೀಡಲು, 2030ರೊಳಗೆ ಈ ರೋಗವನ್ನು ತಡೆಗಟ್ಟಲು ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು. ಹೀಗಾಗಿ, ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ ಎಂದ ತಿಳಿಸಲಾಗಿದೆ.

ಈ ಕಾಯಿಲೆಯನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಿರುವುದರಿಂದ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳು ಶಂಕಿತ ಮತ್ತು ದೃಢಪಟ್ಟ ಪ್ರಕರಣಗಳನ್ನು ಇಲಾಖೆಗೆ ಕಡ್ಡಾಯವಾಗಿ ವರದಿ ಮಾಡಬೇಕಿದೆ.ಕಾನೂನು ಪ್ರಕಾರ ಸರ್ಕಾರಿ ಅಧಿಕಾರಿಗಳಿಗೆ ವರದಿ ಮಾಡಬೇಕಾದ ಕಾಯಿಲೆಗಳು ಅಧಿಸೂಚಿತ ರೋಗವಾಗಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.