ಬೆಂಗಳೂರು: ರಫೆಲ್ ಯುದ್ಧ ವಿಮಾನಗಳ ಖರೀದಿಯಲ್ಲಿ ಹಗರಣ ನಡೆದಿದ್ದು, ತನಿಖೆಗೆ ಸಂಸತ್ತಿನ ಜಂಟಿ ಸದನ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಕಾರ್ಯಕರ್ತರುಮೈಸೂರು ಬ್ಯಾಂಕ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಡಿವೈಎಫ್‌ಐ ರಾಷ್ಟ್ರೀಯ ಅಧ್ಯಕ್ಷ ಮೊಹಮ್ಮದ್ ರಿಯಾಸ್, ‘ಯುದ್ಧ ವಿಮಾನಗಳ ತಯಾರಿಕೆಯಲ್ಲಿ ಸರ್ಕಾರಿ ಸ್ವಾಮ್ಯದ ಎಚ್‍ಎಎಲ್ ಪರಿಣಿತಿ ಪಡೆದಿದೆ. ಅಂಥ ಸಂಸ್ಥೆಗೆ ಸಾಮರ್ಥ್ಯವಿಲ್ಲವೆಂದು ಹೇಳಿ ಅಂಬಾನಿ ಒಡೆತನದ ರಿಲಯನ್ಸ್ ಡಿಫೆನ್ಸ್ ಜೊತೆ ವಿಮಾನಗಳ ತಯಾರಿಕೆಗಾಗಿ ಒಪ್ಪಂದ ಮಾಡಿಕೊಳ್ಳಲಾಗಿದೆ. ಆ ಒಪ್ಪಂದದಲ್ಲೇ ಹಗರಣವಾಗಿದ್ದು, ತನಿಖೆಗೆ ಸಮಿತಿ ರಚಿಸಬೇಕು’ ಎಂದು ಹೇಳಿದರು.
ರಾಜ್ಯ ಘಟಕದ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿದರು. ಜಿಲ್ಲಾ ಘಟಕದ ಅಧ್ಯಕ್ಷ ಎಂ.ನಂಜೇಗೌಡ, ‘ರಫೆಲ್ ವಿಮಾನಗಳ ಖರೀದಿಯಲ್ಲಿ ಅತೀ ದೊಡ್ಡ ಹಗರಣವಾಗಿದೆ. ಖಾಸಗಿ ಕಂಪನಿ ಜೊತೆಗಿನ ಒಪ್ಪಂದವನ್ನು ರದ್ದುಪಡಿಸಿ, ಎಚ್‍ಎಎಲ್ ಜೊತೆಗೆ ಮರು ಒಪ್ಪಂದ ಮಾಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.