ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘ (ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆ) ವತಿಯಿಂದ ನೀಡುವ ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರತಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಸಾಹಿತಿ, ಪತ್ರಕರ್ತ ಜೋಗಿ ಆಯ್ಕೆಯಾಗಿದ್ದಾರೆ.
ಅ.5ರಂದು ಬ್ರಹ್ಮಾವರ ಬಂಟರ ಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿ ₹ 10 ಸಾವಿರ ನಗದು ಒಳಗೊಂಡಿದೆ ಎಂದು ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.