ADVERTISEMENT

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ರಾಹುಲ್‌ ನಾಳೆ ಹಾಜರು ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2024, 9:25 IST
Last Updated 6 ಜೂನ್ 2024, 9:25 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಶೇ 40 ಕಮಿಷನ್ ಸುಳ್ಳು ಜಾಹೀರಾತು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಶುಕ್ರವಾರ ( ಜೂನ್ 7) ಖುದ್ದು ಹಾಜರಾಗುವ ಸಾಧ್ಯತೆ ಇದೆ.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯು ಕಾಂಗ್ರೆಸ್ ವಿರುದ್ಧ ಶೇ 40 ಕಮಿಷನ್, ಪೇ ಸಿಎಂ ಎಂಬ ಜಾಹೀರಾತು ನೀಡಿತ್ತು.  ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಮುಖಂಡ ಕೇಶವ ಪ್ರಸಾದ್ ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಪ್ರಕರಣ ಸಂಬಂಧ ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನ್ಯಾಯಾಲಯಕ್ಕೆ ಹಾಜರಾಗಿ ಬಳಿಕ ಜಾಮೀನು ಪಡೆದಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.