ADVERTISEMENT

ಬೆಂಗಳೂರು–ಕೊಯಮತ್ತೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ

ಪಿಟಿಐ
Published 27 ಡಿಸೆಂಬರ್ 2023, 13:37 IST
Last Updated 27 ಡಿಸೆಂಬರ್ 2023, 13:37 IST
<div class="paragraphs"><p>ಬೆಂಗಳೂರು ಕಂಟೋನ್ಮೆಂಟ್‌ ನಿಲ್ದಾಣಕ್ಕೆ ಆಗಮಿಸಿದ ವಂದೇ ಭಾರತ್ ರೈಲು</p></div>

ಬೆಂಗಳೂರು ಕಂಟೋನ್ಮೆಂಟ್‌ ನಿಲ್ದಾಣಕ್ಕೆ ಆಗಮಿಸಿದ ವಂದೇ ಭಾರತ್ ರೈಲು

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಬೆಂಗಳೂರು ಹಾಗೂ ತಮಿಳುನಾಡಿನ ಕೊಯಮತ್ತೂರು ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನ ಪ್ರಾಯೋಗಿಕ ಸಂಚಾರ ಬುಧವಾರ ನಡೆಯಿತು.

ADVERTISEMENT

ಡಿ.30ರಂದು ಈ ಮಾರ್ಗದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ಅಧಿಕೃತ ಚಾಲನೆ ದೊರಕುವ ಸಂಭವವಿದೆ. ಮಂಗಳೂರು –ಮಡಗಾಂವ್‌ ನಡುವಣ ವಂದೇ ಭಾರತ್‌ ರೈಲಿಗೂ ಇದೇ ದಿನ ಚಾಲನೆ ಸಿಗಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ 5 ಗಂಟೆಗೆ ಕೊಯಮತ್ತೂರಿನಿಂದ ಹೊರಟ ರೈಲು ಬೆಳಿಗ್ಗೆ 10.38ಕ್ಕೆ ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಕ್ಕೆ ತಲುಪಿತು.

ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್‌ ನಿಲ್ದಾಣಕ್ಕೆ ಭೇಟಿ ನೀಡಿ ರೈಲಿನ ‍ಪರಿಶೀಲನೆ ನಡೆಸಿದರು. ರೈಲಿನ ವೇಳಾಪಟ್ಟಿ ಹಾಗೂ ಟಿಕೆಟ್‌ ದರದ ಬಗ್ಗೆ ಶೀಘ್ರವೇ ತಿಳಿಸಲಾಗುವುದು ಎಂದು ನೈಋತ್ಯ ರೈಲ್ವೆ ಹೇಳಿದೆ.

ನೂತನ ರೈಲುಗಳ ವೇಳಾಪಟ್ಟಿಯನ್ನು ಶೀಘ್ರದಲ್ಲಿ ಘೋಷಿಸಲಾಗುವುದು. ಈ ಎರಡು ಹೊಸ ರೈಲುಗಳ ಸೇರ್ಪಡೆಯಿಂದ ಕರ್ನಾಟಕಕ್ಕೆ ಸಿಕ್ಕ ಒಟ್ಟು ವಂದೇ ಭಾರತ್ ರೈಲುಗಳ ಸಂಖ್ಯೆ 5ಕ್ಕೆ ಏರಿಕೆಯಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಗ ಬೆಂಗಳೂರು–ಧಾರವಾಡ, ಮೈಸೂರು–ಚೆನ್ನೈ ಹಾಗೂ ಬೆಂಗಳೂರು–ಕಾಚಿಗುಡ ನಡುವೆ ವಂದೇ ಭಾರತ್ ರೈಲು ಸಂಚರಿಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.