ADVERTISEMENT

ರಾಜ್ಯದಲ್ಲಿ ಇನ್ನೂ 5 ದಿನ ಧಾರಾಕಾರ ಮಳೆ ಸಾಧ್ಯತೆ : ಹವಾಮಾನ ಇಲಾಖೆ

​ಪ್ರಜಾವಾಣಿ ವಾರ್ತೆ
Published 19 ಮೇ 2024, 15:22 IST
Last Updated 19 ಮೇ 2024, 15:22 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ರಾಜ್ಯದಲ್ಲಿ ಇದೇ 20ರಿಂದ ಐದು ದಿನ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ಘೋಷಿಸಿದೆ.

ಇದೇ 20ರಂದು ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ಘೋಷಿಸಿದ್ದರೆ, ಅದೇ ದಿನ ಉತ್ತರ ಕನ್ನಡ, ಹಾವೇರಿ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಸೂಚನೆ ನೀಡಲಾಗಿದೆ.

ADVERTISEMENT

21ರಂದು ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ‘ಆರೆಂಜ್‌’ ಹಾಗೂ ಉತ್ತರ ಕನ್ನಡ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಸೂಚನೆ ನೀಡಲಾಗಿದೆ.

ಇದೇ 22ರಂದು ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ‘ಆರೆಂಜ್‌’ ಹಾಗೂ ಕೊಡಗು, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಸೂಚನೆ ಕೊಡಲಾಗಿದೆ.

ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಿರುಗಾಳಿಯು ಪ್ರತಿಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕೋರಲಾಗಿದೆ.

ಕರಾವಳಿ ಜಿಲ್ಲೆಗಳ ಸಮುದ್ರ ತೀರದಲ್ಲಿ ಪ್ರಕ್ಷುಬ್ಧ ವಾತಾವರಣ ಇರಲಿದೆ. ಅಲೆಗಳ ಅಬ್ಬರ ಇರಲಿದ್ದು, ಮೀನುಗಾರರು ಎಚ್ಚರಿಕೆ ವಹಿಸುವಂತೆಯೂ ಸೂಚನೆ ನೀಡಿದೆ.

ಮಳೆ: ಎಲ್ಲಿ– ಎಷ್ಟು

(ಸೆಂ.ಮೀಗಳಲ್ಲಿ)

ದಾವಣಗೆರೆ ಜಿಲ್ಲೆ

ಚನ್ನಗಿರಿ:12

ಚಿತ್ರದುರ್ಗ ಜಿಲ್ಲೆ

ಹೊಸದುರ್ಗ:12

ಶಿವಮೊಗ್ಗ

ಕೊಮ್ಮನಾಳ ಗ್ರಾ.ಪಂ ವ್ಯಾಪ್ತಿ: 9.1 

ಧಾರವಾಡ ಜಿಲ್ಲೆ

ಹುಬ್ಬಳ್ಳಿ:6.35

ತೇಗೂರ: 5.6 

ಕೊಡಗು ಜಿಲ್ಲೆ

ಕುಟ್ಟ:5

ಬಾಗಲಕೋಟೆ ಜಿಲ್ಲೆ

ಬೇಲೂರ :7

ಕೆರೂರ: 5

ತುಮಕೂರು ಜಿಲ್ಲೆ

ತುಂಬಾಡಿ:5

ಕೇರಳದಲ್ಲಿ ಎಚ್ಚರಿಕೆ

ಕೇರಳದ ಹಲವು ಭಾಗಗಳಲ್ಲಿ ಶನಿವಾರ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದ್ದು, ಗುಡ್ಡಗಾಡು ಮತ್ತು ಕರಾವಳಿ ಪ್ರದೇಶಗಳ ಜನರಿಗೆ ಹೆಚ್ಚು ಜಾಗರೂಕವಾಗಿರುವಂತೆ ಅಧಿಕಾರಿಗಳು ಭಾನುವಾರ ಸೂಚನೆ ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.