ADVERTISEMENT

ರಾಜ್ಯದಲ್ಲಿ ಮುಂದುವರಿದ ಮಳೆ: 6 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 17 ಜುಲೈ 2024, 14:51 IST
Last Updated 17 ಜುಲೈ 2024, 14:51 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರವೂ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. 

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ರೆಡ್‌ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಹಾಗೂ ಹಾಸನ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿಯೂ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ADVERTISEMENT

ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು. ಸಣ್ಣ ಹಡಗುಗಳು ಸಂಚರಿಸದಂತೆ ಕ್ರಮವಹಿಸಬೇಕು. ಸಮುದ್ರದ ದಡದಲ್ಲಿ ಮನೋರಂಜನಾ ಚಟುವಟಿಕೆಗಳನ್ನು ಸಂಪೂರ್ಣ ಸ್ಥಗಿತಗೊಳಿಸಬೇಕು ಎಂದು ಇಲಾಖೆ ಸೂಚಿಸಿದೆ. 

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಬೀಸುವ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ಇರಲಿದೆ ಎಂದು ಇಲಾಖೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.