ಬೆಂಗಳೂರು: ರಾಜ್ಯದಲ್ಲಿ ಗುರುವಾರದಿಂದ ಮಳೆಯ ತೀವ್ರತೆ ತಗ್ಗುವ ಸಾಧ್ಯತೆ ಇದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ವಿವಿಧೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
ರಾಜ್ಯದ ಯಾವುದೇ ಜಿಲ್ಲೆಗೆ ಗುರುವಾರ ಭಾರಿ ಮಳೆಯ ಮುನ್ಸೂಚನೆಯಿಲ್ಲ. ಕರಾವಳಿಯ ಒಂದೆರಡು ಸ್ಥಳಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಇರುವ ಸಂಭವವಿದೆ ಎಂದು ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಳವಾಗುವ ಸಂಭವವಿದೆ ಎಂದಿದೆ.
ಶುಕ್ರವಾರದಿಂದ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.