ADVERTISEMENT

ರಾಜ್ಯದ ಕೆಲವೆಡೆ ಶನಿವಾರ, ಭಾನುವಾರ ಗುಡುಗು ಸಹಿತ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 24 ಮೇ 2024, 15:50 IST
Last Updated 24 ಮೇ 2024, 15:50 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಶನಿವಾರ ಹಾಗೂ ಭಾನುವಾರ ಸಹ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಶನಿವಾರ ಗುಡುಗು ಸಹಿತ ಮಳೆ ಆಗಲಿದೆ. ಈ ಜಿಲ್ಲೆಗಳಲ್ಲಿ ಗಾಳಿಯು ಪ್ರತಿಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ. ಉತ್ತರ ಕನ್ನಡ, ಹಾಸನ, ಮಂಡ್ಯ, ದಾವಣಗೆರೆ ಜಿಲ್ಲೆಯ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ– ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಸಾಧಾರಣಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ADVERTISEMENT

ಉಡುಪಿ, ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಲಿದೆ. ಗಾಳಿಯು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಸೂಚನೆ ನೀಡಿದೆ.

ಸಂಕೇಶ್ವರದಲ್ಲಿ 7 ಸೆಂ.ಮೀ ಮಳೆ:

ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಳಗಾವಿಯ ಸಂಕೇಶ್ವರ ಹಾಗೂ ಕೊಡಗಿನ ನಾಪೋಕ್ಲು ಹೋಬಳಿಯಲ್ಲಿ 7 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಿರವತ್ತಿ, ಕೊಡಗಿನ ಮೂರ್ನಾಡು– ಭಾಗಮಂಡಲ 5 ಸೆಂ.ಮೀ, ಬೆಳಗಾವಿ ನಿಪ್ಪಾಣಿ–ಚಿಕ್ಕೋಡಿ, ಕೊಡಗಿನ ಹಾರಂಗಿಯಲ್ಲಿ 4 ಸೆಂ.ಮೀ, ವಿಜಯಪುರದ ಮುದ್ದೇಬಿಹಾಳ, ಬಾಗಲಕೋಟೆ ಮಹಾಲಿಂಗಪುರ, ಧಾರವಾಡದಲ್ಲಿ 3 ಸೆಂ.ಮೀ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.