ಬೆಂಗಳೂರು: ಟ್ರಫ್ (ಮೋಡಗಳ ಸಾಲು) ರಾಜ್ಯದ ಮೇಲೆಹಾದು ಹೋಗಿರುವ ಕಾರಣ ಇನ್ನೂ ಎರಡು ದಿನ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಆದರೆ, ನಿರಂತರವಾಗಿ ಮಳೆ ಸುರಿಯುವ ಸಾಧ್ಯತೆ ಇಲ್ಲ. ಗರಿಷ್ಠ ಎರಡು ಗಂಟೆ ಮಳೆ ಬೀಳಬಹುದು ಎಂದು ರಾಜ್ಯ ವಿಕೋಪ ನಿರ್ವಹಣಾ ಸಂಸ್ಥೆಯ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದರು.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆದಿದ್ದು, ಕಲಬುರ್ಗಿಯಲ್ಲಿ ಗುರುವಾರ ಗರಿಷ್ಠ 41 ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂದಿನ 48 ಗಂಟೆಯೂ ಒಣ ಹವೆ ಮುಂದುವರೆಯಲಿದೆ ಎಂದರು.
*
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.