ADVERTISEMENT

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರಿ ಮಳೆ: ಹವಾಮಾನ ಇಲಾಖೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2024, 4:30 IST
Last Updated 29 ಜೂನ್ 2024, 4:30 IST
   

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನು ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ದಕ್ಷಿಣ ಕನ್ನಡ ಜಿಲ್ಲೆಗೆ ‘ರೆಡ್‌ ಅಲರ್ಟ್‌’ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ಹಾಗೂ ಬೆಳಗಾವಿ, ಹಾವೇರಿ, ಧಾರವಾಡ, ಹಾಸನ, ಮೈಸೂರು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಗಂಟೆಗೆ 45–50 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸಲಿದೆ. ರಾಯಚೂರು, ಯಾದಗಿರಿ, ಬೀದರ್‌, ಗದಗ, ಕಲಬುರಗಿ, ಚಿಕ್ಕಬಳ್ಳಾಪುರ, ಬೆಂಗಳೂರು, ದಾವಣಗೆರೆ, ಕೋಲಾರ, ಮಂಡ್ಯ ಜಿಲ್ಲೆಯಲ್ಲೂ ಮಳೆಯಾಗುವ ಸಾಧ್ಯತೆಗಳಿವೆಎಂದು ಇಲಾಖೆಯೂ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.