ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆಯಾಗುತ್ತಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಿದೆ. ಉಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಯಾದಗಿರಿ, ವಿಜಯನಗರ, ಗದಗ, ಬೆಳಗಾವಿ, ಧಾರವಾಡದಲ್ಲಿ ಬೆಳಗ್ಗೆಯಿಂದ ಮಳೆಯಾಗುತ್ತಿದೆ.
ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಪೂರ್ವ ಮುಂಗಾರಿನ ಮಳೆಯಿಂದ ಜನರಿಗೆ ಸಂತಸವಾಗಿದೆ.
ಹೊಸಪೇಟೆ: ವಿಜಯನಗರ ಜಿಲ್ಲೆಯಾದ್ಯಂತ ಶನಿವಾರ ನಸುಕಿನಿಂದಲೇ ದಟ್ಟ ಮೋಡ ಕವಿದ ವಾತಾವರಣ ಇದ್ದು, ಹೊಸಪೇಟೆ ನಗರ, ಹೂವಿನಹಡಗಲಿ, ಕೂಡ್ಲಿಗಿ ಭಾಗದಲ್ಲಿ ತುಂತುರು ಮಳೆಯಾಗಿದೆ.
ಯಾದಗಿರಿ: ಜಿಲ್ಲೆಯ ವಿವಿಧೆಡೆ ಶನಿವಾರ ಬೆಳಗಿನ ಜಾವ ತುಂತುರು ಮಳೆಯಾಗಿದ್ದು, ಈಗ ಮೋಡ ಕವಿದ ವಾತಾವರಣ ಇದೆ.
ಉಡುಪಿ: ಜಿಲ್ಲೆಯಾದ್ಯಂತ ಶನಿವಾರ ನಸುಕಿನಲ್ಲಿ ಭಾರಿ ಮಳೆಯಾಗಿದೆ. 2 ತಾಸಿಗೂ ಹೆಚ್ಚು ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿಯಿತು.
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಜೋರಾಗಿ ಮಳೆ ಸುರಿಯಿತ್ತಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ನಂತರ ಗುಡುಗು ಸಹಿತ ಗಾಳಿ ಮಳೆ ರಭಸದಿಂದ ಸುರಿಯಿತು.
ಬೆಳಗಾವಿ: ಜಿಲ್ಲೆಯ ಹಲವೆಡೆ ಶನಿವಾರ ಬೆಳಿಗ್ಗೆಯಿಂದಲೇ ಮಳೆ ಸುರಿಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.