ಶಿವಮೊಗ್ಗ: ಜಿಲ್ಲೆಯಾದ್ಯಂತ ಗುರುವಾರವೂ ಮಳೆ ಮುಂದುವರಿದಿದ್ದು, ತುಂಗಾ, ಭದ್ರಾ, ಶರಾವತಿ ನದಿಗಳು, ತೊರೆ, ಹಳ್ಳ, ಕೊಳ್ಳಗಳು ಉಕ್ಕಿ ಹರಿಯುತ್ತಿವೆ.
ಸಾಗರದಲ್ಲಿ ಸರಾಸರಿ 11.14 ಸೆಂ.ಮೀ. ತೀರ್ಥಹಳ್ಳಿಯಲ್ಲಿ 9.44 ಸೆಂ.ಮೀ ಮಳೆಯಾಗಿದೆ.ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, 52,525 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಶಿವಮೊಗ್ಗ ನಗರದ ಅಮೀರ್ ಅಹಮದ್ ಕಾಲೊನಿಯಲ್ಲಿ ಮುಬೀನಾ ಬಾನು ಎಂಬುವವರ ಮನೆ ಗೋಡೆ ಕುಸಿದಿದೆ. ಆಯನೂರು ಗ್ರಾಮದಲ್ಲಿ ಒಂದು ಮನೆ ಮಳೆಯಿಂದಾಗಿ ಕುಸಿದಿದೆ. ಸಾಗರದಲ್ಲಿ ಪ್ರದೀಪ್ ಎಂಬುವವರ ಮನೆಯ ಗೋಡೆ ಕುಸಿದಿದ್ದು, ಮೂರು ದ್ವಿಚಕ್ರ ವಾಹನಗಳು ಹಾನಿಗೀಡಾಗಿವೆ. ಮನೆಯಲ್ಲಿ ಮಲಗಿದ್ದ ಕುಟುಂಬದ ಸದಸ್ಯರು ಅಪಾಯದಿಂದ ಪಾರಾಗಿದ್ದಾರೆ.
ದಾವಣಗೆರೆ ನಗರವೂ ಸೇರಿ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.