ಮೈಸೂರು: ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ 2019ನೇ ಸಾಲಿನ ‘ಪದ್ಮಶ್ರೀ’ ಪ್ರಶಸ್ತಿಯನ್ನು ಸೋಮವಾರ ಅವರ ಸ್ವಗೃಹದಲ್ಲಿ ಪ್ರದಾನ ಮಾಡಲಾಯಿತು.
2019ರ ಮಾರ್ಚ್ 16ರಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದರು. ರಾಜೀವ್ ತಾರಾನಾಥ್ ಕಾರಣಾಂತರಗಳಿಂದ ಆ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ.
ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧಾ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಜ್ಯೋತಿ, ಜಿಲ್ಲಾಧಿಕಾರಿ ಕಚೇರಿ ಶಿಷ್ಟಾಚಾರ ತಹಶೀಲ್ದಾರ್ ಎಸ್.ಎನ್.ನರಗುಂದ್ ಪ್ರಶಸ್ತಿ ಪ್ರದಾನ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.