ಮಡಿಕೇರಿ: ‘ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರು ಇಡಬೇಕು’ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಇಲ್ಲಿ ಆಗ್ರಹಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜೀವ್ ಗಾಂಧಿ ಅವರ ಹೆಸರು ತೆಗೆದು, ಕಾರ್ಯಪ್ಪ ಅವರ ಹೆಸರನ್ನು ನಾಮಕರಣ ಮಾಡಬೇಕು’ ಎಂದು ಒತ್ತಾಯಿಸಿದರು.
‘ಮೂರೂ ಸೇನಾ ಪಡೆಗಳಿಗೆ ಕಾರ್ಯಪ್ಪ ಅವರು ಮುಖ್ಯಸ್ಥರಾಗಿದ್ದರು. ಅವರಿಗೆ ಗೌರವ ಕೊಡುವ ಕೆಲಸ ಆಗಬೇಕು. ಸಾಮಾಜಿಕ ಜಾಲತಾಣಗಳಲ್ಲೂ ಇದೇ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರಿಗೂ ಪತ್ರ ಬರೆಯುತ್ತೇನೆ’ ಎಂದು ಹೇಳಿದರು.
‘ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕು ಎನ್ನುವ ಕೂಗು ಎದ್ದಿದೆ. ಇಂದಿರಾ ಕ್ಯಾಂಟೀನ್‌ಗೆ ಜೀವನದಿ ಕಾವೇರಿಯ ಹೆಸರನ್ನು ಇಡಬೇಕು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಅನ್ನಪೂರ್ಣೇಶ್ವರಿ ಹೆಸರು ಸೂಚಿಸಿದ್ದಾರೆ. ‘ಕಾವೇರಿ’ ಎಂಬುದೇ ಸೂಕ್ತವಾದ ಹೆಸರು’ ಎಂದು ರಂಜನ್ ಪ್ರತಿಪಾದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.