ಬೆಂಗಳೂರು: ‘ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ (ಆರ್‌ಜಿಯುಎಚ್‌ಎಸ್) ನೇಮಕಗೊಂಡ ಪ್ರಾಯೋಗಿಕ ಪರೀಕ್ಷೆಗಳ ಪರೀಕ್ಷಕರು ಕ್ಲಿನಿಕಲ್ ಪರೀಕ್ಷೆಯಲ್ಲಿ ಪದೇಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಅವರನ್ನು ಕಪ್ಪುಪಟ್ಟಿಗೆ ಸೇರಿಸಲು ಇದು ಸಕಾಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಸಂಬಂಧನಾಲ್ಕನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ದಾಸರಿ ಚಕ್ರಧರ್ ಮತ್ತು ಶಶಿಕುಮಾರ್ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ಕೃಷ್ಣಭಟ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ತಪ್ಪು ಎಸಗಿರುವ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪರೀಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆದೇಶಿಸಿದೆ.
‘ವಿಶ್ವವಿದ್ಯಾಲಯವು ನೇಮಿಸಿದ ಪರೀಕ್ಷಕರು ಕ್ಲಿನಿಕಲ್ ಪರೀಕ್ಷೆ ನಡೆಸುವಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ’ ಎಂಬ ಅರ್ಜಿದಾರರು ಆಕ್ಷೇಪಣೆಯನ್ನು ಪರಿಗಣಿಸಿರುವ ನ್ಯಾಯಪೀಠವು, ‘ಅರ್ಜಿದಾರರಿಗೆಮೂರು ವಾರಗಳಲ್ಲಿ ಕ್ರಮವಾಗಿ ಶಸ್ತ್ರಚಿಕಿತ್ಸೆ ಮತ್ತು ಪೀಡಿಯಾಟ್ರಿಕ್ಸ್‌ನ ಅನುತ್ತೀರ್ಣ ವಿಷಯಗಳಿಗೆ ಹೊಸದಾಗಿ ಪ್ರಾಯೋಗಿಕ ಪರೀಕ್ಷೆ ನಡೆಸಿ’ ಎಂದು ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.