ಬೆಂಗಳೂರು: ‘ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಸಮಾಜವು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದೆ. ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಯ ನಂತರದ ಸ್ಥಾನವನ್ನು ವೀರಶೈವ ಲಿಂಗಾಯತ ಸಮಾಜಕ್ಕೇ ನೀಡಬೇಕು’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಪೀಠಾಧ್ಯಕ್ಷ ವೀರಸೋಮೆಶ್ವರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿ, ‘ಕಾಂಗ್ರೆಸ್‌ಗೆ ಜನರೇ ಪ್ರಚಂಡ ಜಯ ತಂದುಕೊಟ್ಟಿದ್ದಾರೆ. ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಪ್ರಾಮಾಣಿಕವಾಗಿ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.
‘ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಇಬ್ಬರೂ ಪಕ್ಷಕ್ಕಾಗಿ ದುಡಿದಿದ್ದಾರೆ. ಮುಖ್ಯಮಂತ್ರಿ ಯಾರು ಎಂಬುದನ್ನು ಆ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ನಾನು ಸ್ವಾಮೀಜಿಯಾಗಿ ಪ್ರತಿಕ್ರಿಯಿಸುವುದಿಲ್ಲ. ಯಾರೇ ಅಧಿಕಾರಕ್ಕೆ ಬಂದರೂ ಉತ್ತಮ ಆಡಳಿತ ನೀಡಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.