ಬೆಂಗಳೂರು: ‘ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಸಚಿವ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.
ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಮನುಷ್ಯ ಮೌಲ್ಯಗಳಿಗೆ ಬೆಲೆ ಕೊಡಬೇಕು ಅನ್ನೋದಾದ್ರೆ ರಾಜೀನಾಮೆ ಪಡೆಯಬೇಕು’ ಎಂದು ಒತ್ತಾಯಿಸಿದರು.
ಇದನ್ನೂ ಓದಿ–ಸಿ.ಡಿ: ಬಾಲಚಂದ್ರ ಜಾರಕಿಹೊಳಿ ಹೇಳಿದ್ದೇನು?
‘ಇದು ಇಡೀ ರಾಷ್ಟ್ರಕ್ಕೆ ಗೊತ್ತಾಗಿರುವ ವಿಷಯ. ತಕ್ಷಣ ಪೋಲಿಸರು ಎಫ್‌ಐಆರ್ ದಾಖಲಿಕೊಂಡು ತನಿಖೆ ನಡೆಸಬೇಕು’ ಎಂದೂ ಸಿದ್ದರಾಮಯ್ಯ ಹೇಳಿದರು.
ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪದ ಮೇಲೆ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಮಂಗಳವಾರ ದೂರು ಸಲ್ಲಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.