ADVERTISEMENT

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣಗೆ ಮತ್ತೆ ವೈದ್ಯಕೀಯ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 19:46 IST
Last Updated 15 ಜೂನ್ 2024, 19:46 IST
<div class="paragraphs"><p>ಪ್ರಜ್ವಲ್ ರೇವಣ್ಣ</p></div>

ಪ್ರಜ್ವಲ್ ರೇವಣ್ಣ

   

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಎಸ್‌ಐಟಿ ಕಸ್ಟಡಿಯಲ್ಲಿ ಇರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬೌರಿಂಗ್‌ ಆಸ್ಪತ್ರೆಯಲ್ಲಿ ಶನಿವಾರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.

ಮೊದಲು ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. 2ನೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ಗೆ ಶನಿವಾರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

ADVERTISEMENT

‘ನಾಲ್ಕು ಮಂದಿಯನ್ನು ಒಳಗೊಂಡ ವೈದ್ಯರು ಪ್ರಜ್ವಲ್‌ಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ ಎಫ್‌ಎಸ್‌ಎಲ್ ಅಧಿಕಾರಿಗಳ ತಂಡವೂ ಇತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಬಗೆಯ ಪರೀಕ್ಷೆಗಳನ್ನು ವೈದ್ಯರ ತಂಡ ನಡೆಸಿದೆ. ಅವರು ನಮಗೆ ವರದಿ ನೀಡಲಿದ್ದಾರೆ’ ಎಂದು ತನಿಖಾಧಿಕಾರಿಗಳು ತಿಳಿಸಿದರು.

‘ನ್ಯಾಯಾಂಗ ಬಂಧನದಲ್ಲಿ ಪ್ರಜ್ವಲ್‌ ಅವರನ್ನು ಬಾಡಿ ವಾರಂಟ್‌ ಮೇಲೆ ಮತ್ತೆ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಎಸ್‌ಐಟಿಗೆ ಕಚೇರಿಯಲ್ಲೇ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು. ‌

ಧ್ವನಿ ಮಾದರಿ ಸಂಗ್ರಹಿಸಿ ಸಾಕ್ಷ್ಯ ಕಲೆ:

‘ಈಗಾಗಲೇ ಆರೋಪಿಯ ಧ್ವನಿ ಮಾದರಿ ಸಂಗ್ರಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ತಾಂತ್ರಿಕ ಸಾಕ್ಷ್ಯಗಳನ್ನು ಕಲೆ ಹಾಕಲಾಗುತ್ತಿದೆ. ವಿಡಿಯೊದಲ್ಲಿ ಕಾಣಿಸಿದ ಪುರುಷನ ಅಂಗಾಂಗಳೊಂದಿಗೆ ಪ್ರಜ್ವಲ್ ಅಂಗಗಳನ್ನು ಹೋಲಿಕೆ ಮಾಡಲು ತನಿಖಾ ತಂಡ ಮುಂದಾಗಿದೆ. ಈ ಪರೀಕ್ಷೆಗೆ ಗುಜರಾತ್‌ನ ಅಹಮದಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯ ಹಾಗೂ ವಿದೇಶಿ ತಜ್ಞರ ನೆರವು ಪಡೆದುಕೊಳ್ಳುತ್ತೇವೆ’ ಎಂದು ತನಿಖಾ ತಂಡದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.