ADVERTISEMENT

ಅತ್ಯಾಚಾರ ಪ್ರಕರಣ: ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಅರ್ಜಿ

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 15:54 IST
Last Updated 4 ಜುಲೈ 2024, 15:54 IST
<div class="paragraphs"><p>ಪ್ರಜ್ವಲ್‌&nbsp;ರೇವಣ್ಣ</p></div>

ಪ್ರಜ್ವಲ್‌ ರೇವಣ್ಣ

   

ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿವೆ.

ADVERTISEMENT

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಎಫ್‌ಐಆರ್‌ ಪ್ರಕರಣದಲ್ಲಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿ 2024ರ ಜೂನ್‌ 26ರಂದು ಆದೇಶಿಸಿತ್ತು. ಹೀಗಾಗಿ, ಅವರು ಈ ಪ್ರಕರಣದಲ್ಲಿ ನಿಯಮಿತ ಜಾಮೀನು ಕೋರಿ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದಾರೆ.

ಸಿಐಡಿ ಪೊಲೀಸರು ದಾಖಲಿಸಿರುವ ಎರಡು ಪ್ರತ್ಯೇಕ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ವಿಶೇಷ ನ್ಯಾಯಪೀಠದಲ್ಲಿ ಶುಕ್ರವಾರ (ಜುಲೈ 5) ಮಧ್ಯಾಹ್ನ 2.30ಕ್ಕೆ ವಿಚಾರಣೆಗೆ ನಿಗದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.