ಮಡಿಕೇರಿ: ‘ಕೊಡಗು ಜಿಲ್ಲೆಯಲ್ಲಿ 14 ಇಲಿ ಜ್ವರ ಪ್ರಕರಣಗಳು ಕಂಡುಬಂದಿರುವುದರಿಂದ ಸ್ವಚ್ಛತೆ ನಿರ್ವಹಣೆಗೆ ಹೆಚ್ಚು ಗಮನ
ಕೊಡಬೇಕು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಆರ್.ವೆಂಕಟೇಶ್ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಡಿಕೇರಿ ತಾಲ್ಲೂಕಿನಲ್ಲಿ 7, ಸೋಮವಾರಪೇಟೆ ತಾಲ್ಲೂಕಿನಲ್ಲಿ 2, ವಿರಾಜಪೇಟೆ ತಾಲ್ಲೂಕಿನಲ್ಲಿ 5 ಪ್ರಕರಣಗಳು ಕಂಡು ಬಂದಿವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.