ADVERTISEMENT

ಕೈಗಾ ವಿಸ್ತರಣೆ ವಿರುದ್ಧ ಪ್ರಧಾನಿ ಬಳಿಗೆ ನಿಯೋಗ ಹೋಗಲು ಸಿದ್ಧ: ಪೇಜಾವರ ಶ್ರೀ

ಕೈಗಾ 5, 6ನೇ ಘಟಕ ಸ್ಥಾಪನೆ ವಿರೋಧಿ ಜನಜಾಗೃತಿ ಸಮಾವೇಶದಲ್ಲಿ ಪೇಜಾವರ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2019, 15:09 IST
Last Updated 17 ನವೆಂಬರ್ 2019, 15:09 IST
ಪೇಜಾವರ ಶ್ರೀ
ಪೇಜಾವರ ಶ್ರೀ   

ಕಾರವಾರ: ‘ಕೈಗಾ ಅಣು ವಿದ್ಯುತ್ ಸ್ಥಾವರದ ಐದು ಮತ್ತು ಆರನೇ ಘಟಕಗಳ ಸ್ಥಾಪನೆ ವಿರುದ್ಧ ಕೇಂದ್ರ ಸರ್ಕಾರದ ಬಳಿಗೆ ನಿಯೋಗ ಕರೆದುಕೊಂಡು ಹೋಗಲು ಸಿದ್ಧನಿದ್ದೇನೆ. ಈ ಹೋರಾಟದಲ್ಲಿ ಇರುವ ಎಲ್ಲರೂ ನಮ್ಮ ಜೊತೆಯಾಗಬೇಕು’ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಮಲ್ಲಾಪುರದಲ್ಲಿ ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕಗಳ ವಿರೋಧಿ ಹೋರಾಟ ಸಮಿತಿಯು ಭಾನುವಾರ ಹಮ್ಮಿಕೊಂಡ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಭೂಮಿಯ ಧಾರಣಾ ಸಾಮರ್ಥ್ಯವನ್ನು ಅಧ್ಯಯನ ಮಾಡದೇ ಹೊಸ ಯೋಜನೆಗಳನ್ನು ಜಾರಿ ಮಾಡುವುದು ಸರಿಯಲ್ಲ’ ಎಂದೂ ಅವರು ಅಭಿಪ್ರಾಯಪಟ್ಟರು.

ADVERTISEMENT

ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ,‘ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಗಳಿಗೆ ಹೋದಾಗ ಭಾರತದಲ್ಲಿ ಅಸಾಂಪ್ರದಾಯಿಕ ಇಂಧನಗಳ ಬಳಕೆಗೆ ಹೆಚ್ಚು ಆದ್ಯತೆ ಕೊಡುತ್ತಿದ್ದೇವೆ ಎಂದು ಹೇಳುತ್ತಾರೆ. ಆದರೆ, ಇಲ್ಲಿ ಅಣು ವಿ‌ದ್ಯುತ್ ಸ್ಥಾವರದಂತಹ ಯೋಜನೆಗಳು ಮುಂದುವರಿಯುತ್ತಿವೆ. ಇಂಥ ವ್ಯತಿರಿಕ್ತಗಳು ಯಾಕೆ?ನವೀಕರಿಸಬಹುದಾದ ಇಂಧನಗಳ ಬಗ್ಗೆ ಈ ಕಾಳಜಿ ಇರುವಂತೆ ಮಾತನಾಡುತ್ತಿರುವ ಈಗಿನ ಪ್ರಧಾನಿಯ ಅವಧಿಯಲ್ಲೇ ಕೈಗಾ ಯೋಜನೆಯ ವಿಸ್ತರಣೆಯನ್ನು ವಿರೋಧಿಸಬೇಕು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ವಿಜ್ಞಾನಿಗಳು, ಪರಿಸರವಾದಿಗಳು ಸೇರಿದಂತೆ ವಿವಿಧ ಕ್ಷೇತ್ರಗಳ ವಿಷಯ ತಜ್ಞರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.