ADVERTISEMENT

ಕೆಪಿಸಿಸಿ ಅಧ್ಯಕ್ಷನಾದರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ: ಸಚಿವ ಕೆ.ಎನ್‌. ರಾಜಣ್ಣ

​ಪ್ರಜಾವಾಣಿ ವಾರ್ತೆ
Published 25 ಮೇ 2024, 23:30 IST
Last Updated 25 ಮೇ 2024, 23:30 IST
<div class="paragraphs"><p>ಸಚಿವ ಕೆ.ಎನ್‌. ರಾಜಣ್ಣ</p></div>

ಸಚಿವ ಕೆ.ಎನ್‌. ರಾಜಣ್ಣ

   

ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದಾದರೆ ಸಚಿವ ಸ್ಥಾನ ತ್ಯಾಗಕ್ಕೆ ನಾನು ಸಿದ್ಧ’ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಹೇಳಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡುವುದಾದರೆ ನಾನೂ ಕೂಡ ಆಕಾಂಕ್ಷಿ. ಅದಕ್ಕಾಗಿ ಮಂತ್ರಿ ಸ್ಥಾನ ಬಿಟ್ಟು ಕೆಲಸ ಮಾಡಲು ಸಿದ್ಧನಾಗಿದ್ದೇನೆ’ ಎಂದರು.

ADVERTISEMENT

‘ಕೆಪಿಸಿಸಿ ಅಧ್ಯಕ್ಷನಾದರೆ ಮುಂದೆ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಪೂರ್ಣ ಪ್ರಮಾಣದಲ್ಲಿ ಪಕ್ಷದ ಸಂಘಟನೆಗೆ ಸಮಯ ಮೀಸಲಿಡುವೆ. ಯಾವ ರಾಜಕೀಯ ಅಧಿಕಾರವೂ ನನಗೆ ಬೇಕಿಲ್ಲ. ತನು, ಮನ ಅರ್ಪಿಸಿ ಪಕ್ಷಕ್ಕಾಗಿ ದುಡಿಯುವೆ’ ಎಂದು ಹೇಳಿದರು.

ಹೈಕಮಾಂಡ್‌ ನಿರ್ಧರಿಸುತ್ತದೆ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ, ‘ಅಧ್ಯಕ್ಷರ ಬದಲಾವಣೆ ಕುರಿತು ನನಗೆ ಗೊತ್ತಿಲ್ಲ. ಅದನ್ನು ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ ನಿರ್ಧರಿಸುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.