ADVERTISEMENT

ಸಹಾಯಕ ಪ್ರಾಧ್ಯಾಪಕರ ಆಯ್ಕೆ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2023, 15:31 IST
Last Updated 4 ನವೆಂಬರ್ 2023, 15:31 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 26 ಬೋಧನಾ ವಿಷಯಗಳ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2022ರ ಮಾರ್ಚ್‌ನಲ್ಲಿ ಪರೀಕ್ಷೆ ನಡೆಸಿತ್ತು. 33,379 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಸಂದರ್ಶನ ಇಲ್ಲದೇ ಅಂಕಗಳ ಆಧಾರದಲ್ಲೇ ನೇಮಕ ಪ್ರಕ್ರಿಯೆ ನಡೆಸಲಾಗಿತ್ತು. ನಂತರ ಅಂತಿಮ ಪಟ್ಟಿ ಪ್ರಕಟಿಸಿದರೂ, ಪರೀಕ್ಷೆಯಲ್ಲಿ ಕ್ರಮಗಳು ನಡೆದಿರುವುದು ಪತ್ತೆಯಾಗಿದ್ದ ಕಾರಣ ಸರ್ಕಾರ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಿತ್ತು. ಕೊನೆಗೂ ವಿಚಾರಣೆ ಬಾಕಿ ಇರುವ ನ್ಯಾಯಾಲದ ಪ್ರಕರಣಗಳಲ್ಲಿನ ತೀರ್ಪುಗಳಿಗೆ ಒಳಪಟ್ಟು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ.

ADVERTISEMENT

1,209 ಅಭ್ಯರ್ಥಿಗಳ ಪಟ್ಟಿ ಇದ್ದು, 33 ಹುದ್ದೆಗಳಿಗೆ ಮೀಸಲಾತಿ ನಿಯಮಗಳ ಪ್ರಕಾರ ಸೂಕ್ತ ಅಭ್ಯರ್ಥಿಗಳು ಲಭ್ಯವಾಗಿಲ್ಲ. ಹಾಗಾಗಿ, ಈ ಹುದ್ದೆಗಳನ್ನು ಖಾಲಿ ಬಿಡಲಾಗಿದೆ. ಜೀವ ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ರಸಾಯನಶಾಸ್ತ್ರ, ಕಂಪ್ಯೂಟರ್ ಸೈನ್ಸ್‌, ಅರ್ಥಶಾಸ್ತ್ರ, ಫ್ಯಾಶನ್‌ ತಂತ್ರಜ್ಞಾನ, ಹಿಂದಿ, ಇತಿಹಾಸ, ಗಣಿತ, ಮೈಕ್ರೋಬಯಾಲಜಿ, ಭೌತಶಾಸ್ತ್ರ, ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ಉರ್ದು ವಿಷಯದ ಹುದ್ದೆಗಳು ಖಾಲಿ ಉಳಿದಿವೆ. 

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತ್ವರಿತವಾಗಿ ನೇಮಕಾತಿ ಆದೇಶ ನೀಡಲು ಕ್ರಮಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌ ಕೆಲ ದಿನಗಳ ಹಿಂದೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.