ಬೆಂಗಳೂರು: ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನಗಳು ದೂರವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಟ್ವೀಟ್ ಮಾಡಿರುವ ಅವರು, ‘ಸರ್ಕಾರಿ ಉದ್ಯೋಗಗಳಿಗೆ ಲಂಚ ಕೊಡುವ ಶಕ್ತಿಯಿಲ್ಲದ ಬಡ ಉದ್ಯೋಗಕಾಂಕ್ಷಿಗಳು ತಮ್ಮ ಪೋಷಕರು ಬೆಳೆದ ಅಕ್ಕಿ, ರಾಗಿ, ಜೋಳ ಮುಂತಾದ ಬೆಳೆಗಳ ಗಂಟನ್ನು ನನ್ನ ಕೈಗಿತ್ತು ಸರ್ಕಾರಕ್ಕೆ ತಲುಪಿಸಿ, ಉದ್ಯೋಗ ಕೊಡಿಸಿ ಎಂದು ಕೋರಿದ್ದಾರೆ. ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ ಬಿಜೆಪಿ ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ’ ಎಂದು ಟೀಕಿಸಿದ್ದಾರೆ.
‘ರಾಜ್ಯ ಸರ್ಕಾರವು ಸರ್ಕಾರಿ ನೇಮಕಾತಿಗಳಲ್ಲಿ ನಡೆಸುತ್ತಿರುವ ಅಕ್ರಮಗಳಿಂದಾಗಿ ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿದ ಅಭ್ಯರ್ಥಿಗಳಿಗೆ ಉದ್ಯೋಗ ಸಿಗದೆ, ಬದುಕು ಅತಂತ್ರವಾಗಿದೆ. ಇಂತಹ ಲಕ್ಷಾಂತರ ನೊಂದ ಯುವ ಜನರ ಪರವಾಗಿ ಸದನದ ಒಳಗೆ ಮತ್ತು ಹೊರಗೆ ನನ್ನ ಹೋರಾಟ ಮುಂದುವರೆಸುತ್ತೇನೆ. ಪಾರದರ್ಶಕ ನೇಮಕಾತಿ ನಡೆಯಲಿ, ಅರ್ಹರು ಆಯ್ಕೆಯಾಗಲಿ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.