ನವದೆಹಲಿ: ಆಹಾರೋತ್ಪನ್ನದ ಸಬ್ಸಿಡಿ ವೆಚ್ಚ ಮತ್ತು ಹೊರೆಯನ್ನು ಕಡಿಮೆ ಮಾಡಲು ಹೆಚ್ಚಿನ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕೇಂದ್ರ ಆಹಾರ ಹಾಗೂ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಸೂಚಿಸಿದರು.
ಭಾರತೀಯ ಆಹಾರದ ನಿಗಮದ (ಎಫ್‌ಸಿಐ) ಕೇಂದ್ರ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿದ ಅವರು, ದೇಶದ ಆಹಾರ ವಿತರಣಾ ವ್ಯವಸ್ಥೆಯ ದಕ್ಷತೆಯನ್ನು ಸುಧಾರಿಸುವ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ನಿಗಮದ ಕಾರ್ಯಾಚರಣೆಗಳು, ಸಾಧನೆಗಳು ಮತ್ತು ಆಹಾರ ಭದ್ರತೆಯನ್ನು ಖಾತರಿಪಡಿಸುವ ಪ್ರಮುಖ ಉಪಕ್ರಮಗಳ ಕುರಿತು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.