ಬೆಂಗಳೂರು: ಯಶಸ್ವಿನಿ ಯೋಜನೆಯ ನೋಂದಣಿಗೆ ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ.
2022–23ನೇ ಸಾಲಿನಿಂದ ಈ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ಮೂರನೇ ಬಾರಿ ನೋಂದಣಿಯ ಅವಧಿಯನ್ನು ವಿಸ್ತರಿಸಲಾಗಿದೆ.
ಹೊಸ ಸದಸ್ಯರ ನೋಂದಣಿಗೆ 2023ರ ಫೆ.28 ಕೊನೆಯ ದಿನವಾಗಿತ್ತು. ಈ ಯೋಜನೆ ಅಡಿಯಲ್ಲಿ 30 ಲಕ್ಷ ಸದಸ್ಯರನ್ನು ನೋಂದಾಯಿಸಲು ಗುರಿ ನಿಗದಿಪಡಿಸಲಾಗಿತ್ತು. ಇಲ್ಲಿಯವರೆಗೆ 34.52 ಲಕ್ಷ ಸದಸ್ಯರನ್ನು ನೋಂದಾಯಿಸಿಕೊಳ್ಳಲಾಗಿದೆ.
2023ರ ಜನವರಿ 1ರಿಂದ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಫಲಾನುಭವಿಗಳಿಗೆ ಚಿಕಿತ್ಸೆ ಆರಂಭಿಸಲಾಗಿದ್ದು, ಇದುವರೆಗೆ ಸುಮಾರು ಮೂರು ಸಾವಿರ ಫಲಾನುಭವಿಗಳು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಸಹಕಾರ ಇಲಾಖೆ ಜಂಟಿ ಕಾರ್ಯದರ್ಶಿ ಎ.ಸಿ. ದಿವಾಕರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.