ಬೆಂಗಳೂರು: ಆಗಸ್ಟ್‌ನಲ್ಲಿ ಕಾಣಿಸಿಕೊಂಡ ಭಾರಿ ಮಳೆ, ಪ್ರವಾಹದಿಂದಾಗಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ₹400 ಕೋಟಿ ಬಿಡುಗಡೆ ಮಾಡಿದೆ.
ಆಗಸ್ಟ್‌ನಲ್ಲಿ ಉಂಟಾದ ಪ್ರವಾಹದಿಂದ ರಾಜ್ಯದ 103 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ. ಪ್ರವಾಹ ಪರಿಹಾರ ಕಾರ್ಯಗಳಿಗೆ ₹3891 ಕೋಟಿ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಮೊದಲ ಕಂತಿನಲ್ಲಿ ಕೇಂದ್ರ ಸರ್ಕಾರ ₹1200 ಕೋಟಿ ಬಿಡುಗಡೆ ಮಾಡಿದ್ದು, ಈ ಪೈಕಿ ₹400 ಕೋಟಿಗಳನ್ನು ಬೆಳೆ ನಷ್ಟ ಪರಿಹಾರಕ್ಕೆ ಒದಗಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರವಾಹದಿಂದ ಹಾನಿಗೊಳದಾಗ ಬೆಳೆಗಳಿಗೆ ಪರಿಹಾರವನ್ನು ‘ಪರಿಹಾರ ತಂತ್ರಾಂಶ’ದ ಮೂಲಕ ರೈತರ ಖಾತೆಗಳಿಗೆ ನೇರವಾಗಿ ಜಮೆ ಮಾಡಬೇಕು ಎಂದೂ ಆದೇಶದಲ್ಲಿ ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.