ADVERTISEMENT

ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವುದು ರಾಮನಿಗೆ ಮಾಡುವ ಅಪಮಾನ: ಕುಮಾರಸ್ವಾಮಿ 

​ಪ್ರಜಾವಾಣಿ ವಾರ್ತೆ
Published 5 ಜನವರಿ 2020, 14:39 IST
Last Updated 5 ಜನವರಿ 2020, 14:39 IST
ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ   

ಬೆಂಗಳೂರು:ರಾಮನಗರ ಜಿಲ್ಲೆಯಎಂಬ ಹೆಸರನ್ನುನವ ಬೆಂಗಳೂರು ಎಂದು ಬದಲಿಸುವುದು ರಾಮನಿಗೆ ಮಾಡುವ ಅನ್ಯಾಯ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯ ಸರ್ಕಾರ ರಾಮನಗರದ ಹೆಸರು ಬದಲಿಸಿದರೆ, ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದಿದ್ದಾರೆ ಕುಮಾರಸ್ವಾಮಿ.

ರಾಮನಗರ ಜಿಲ್ಲೆಯ ಹೆಸರು ಬದಲಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಸರಣಿ ಟ್ವೀಟ್ ಮಾಡಿದ ಕುಮಾರಸ್ವಾಮಿ, ಬಿಎಸ್‌ವೈಅವರೇ, ರಾಮನಗರದ ಅಭಿವೃದ್ಧಿ ಮಾಡುವ ಇಚ್ಛೆನಿಮಗಿದ್ದರೆ, ಜಿಲ್ಲೆಗೆ ನಾನು ನನ್ನ ಬಜೆಟ್‌ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ, ನನ್ನ ಜನರ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ ಎಂದಿದ್ದಾರೆ.

ADVERTISEMENT

ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ‌. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ ಎಂದು #SaveRamanagara ಹ್ಯಾಷ್‌ಟ್ಯಾಗ್ ಬಳಸಿ ಎಚ್‌ಡಿಕೆ 10 ಟ್ವೀಟ್‌ಗಳನ್ನು ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.