ಬೆಂಗಳೂರು: ಖಾಸಗಿ ಶಾಲೆಗಳ ಮಾನ್ಯತೆಯನ್ನು 10 ವರ್ಷಗಳಿಗೆ ಒಮ್ಮೆ ನವೀಕರಿಸಲು ಅವಕಾಶ ನೀಡಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶಾಲೆ ನಡೆಸಲು ಒಮ್ಮೆ ಅನುಮತಿ ಪಡೆದ ಶಾಲೆಗಳು 10 ವರ್ಷಗಳ ನಂತರ ನವೀಕರಣಕ್ಕೆ ಅರ್ಜಿ ಸಲ್ಲಿಸಬೇಕು. ನಿಯಮಗಳನ್ನು ಪಾಲಿಸುವ ಶಾಲೆಗಳು ಶಾಶ್ವತ ಮಾನ್ಯತೆಯನ್ನೂ ಪಡೆಯಬಹುದು ಎಂದು ಆದೇಶದಲ್ಲಿ ವಿವರಿಸಲಾಗಿದೆ.
ರಾಜ್ಯದಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಜಾರಿಗೂ ಮೊದಲು ಇದ್ದಂತೆ ಮಾನ್ಯತೆ ನವೀಕರಣಕ್ಕೆ ಅವಕಾಶ ನೀಡಬೇಕು ಎಂದು ಖಾಸಗಿ ಶಾಲೆಗಳ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿತ್ತು. ಕೆಲ ಸಂಘಟನೆಗಳು ಸರ್ಕಾರದ ಕ್ರಮದ ವಿರುದ್ಧ ಕೋರ್ಟ್ ಮೊರೆಹೋಗಿದ್ದವು.
ಹಿಂದೆ 15 ವರ್ಷಗಳಿಗೆ ಒಮ್ಮೆ ಮಾನ್ಯತೆ ನವೀಕರಣಕ್ಕೆ ಅವಕಾಶ ಇತ್ತು. 2018ರ ನಂತರ ಮಾನ್ಯತೆ ನವೀಕರಣ ಅವಧಿಯನ್ನು ಐದು ವರ್ಷಗಳಿಗೆ ಇಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.