ADVERTISEMENT

ಯಡಿಯೂರಪ್ಪಗೆ ರೇಣುಕಾಚಾರ್ಯ ಪ್ರಶಸ್ತಿ

ರೇಣುಕಾಚಾರ್ಯ ಜಯಂತಿಯಲ್ಲಿ ಇಂದು ಪ್ರದಾನ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2023, 23:15 IST
Last Updated 4 ಮಾರ್ಚ್ 2023, 23:15 IST
ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಅಂಗವಾಗಿ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಶನಿವಾರ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ಜರುಗಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಇತರರು ಪಾಲ್ಗೊಂಡಿದ್ದರು

ರಂಭಾಪುರಿ ಪೀಠ (ಬಾಳೆಹೊನ್ನೂರು): ರಂಭಾಪುರಿ ಪೀಠದಿಂದ ಕೊಡುವ ‘ರೇಣುಕಾಚಾರ್ಯ ಪ್ರಶಸ್ತಿ’ಗೆ ಶಾಸಕ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹1 ಲಕ್ಷ ನಗದು, ಸ್ಮರಣಿಕೆ ಒಳಗೊಂಡಿದೆ.

ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ ಅಂಗವಾಗಿ ಮಾ.5ರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸುವರು. ‘ರಂಭಾಪುರಿ ಬೆಳಗು’ ಸಂಚಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಬಿಡುಗಡೆಗೊಳಿಸುವರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ.ವೈ. ರಾಘವೇಂದ್ರ, ಸಚಿವರಾದ ಸಿ.ಸಿ.ಪಾಟೀಲ, ಸುನಿಲ್ ಕುಮಾರ್, ಶಂಕರ್ ಪಾಟೀಲ ಮುನೇನಕೊಪ್ಪ, ಶಾಸಕರಾದ ಸಿ.ಟಿ.ರವಿ., ಟಿ.ಡಿ.ರಾಜೇಗೌಡ, ಡಿ.ಎನ್.ಜೀವರಾಜ್, ಬೇಳೂರು ರಾಘವೇಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT