ADVERTISEMENT

ಕೋರ್ಟ್‌ಗೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ: ಪವಿತ್ರಾ A1, ದರ್ಶನ್ A2 ಆರೋಪಿ

ರೇಣುಕಸ್ವಾಮಿ ಕೊಲೆ ಪ್ರಕರಣ: 17 ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 5:48 IST
Last Updated 4 ಸೆಪ್ಟೆಂಬರ್ 2024, 5:48 IST
<div class="paragraphs"><p>ರೇಣುಕಾಸ್ವಾಮಿ ಕೊಲೆ ಆರೋಪಿಗಳು</p></div>

ರೇಣುಕಾಸ್ವಾಮಿ ಕೊಲೆ ಆರೋಪಿಗಳು

   

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿದ್ದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಆರೋಪಿ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಸೇರಿದಂತೆ 17 ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ವಿಜಯನಗರ ಎಸಿಪಿ ಚಂದನ್ ನೇತೃತ್ವದಲ್ಲಿ ‌ತನಿಖೆ ನಡೆದಿತ್ತು.

ರಟ್ಟಿನ ಬಾಕ್ಸ್‌ನಲ್ಲಿ ಮುದ್ರಿತ ಪ್ರತಿಗಳನ್ನು ತಂದ ತನಿಖಾ ತಂಡ ನ್ಯಾಯಾಲಯಕ್ಕೆ ಸಲ್ಲಿಸಿದೆ. 3,991 ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ. ಒಟ್ಟು 20 ಪ್ರತಿಗಳನ್ನು ಸಲ್ಲಿಸಲಾಗಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ಮೂವರು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ, ಎಂಟು ವರದಿಗಳು, 231ಕ್ಕೂ ಹೆಚ್ಚು ಸಾಕ್ಷ್ಯಾದಾರರ ಹೇಳಿಕೆ ಸಹಿತ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ದರ್ಶನ್ ಎರಡನೇ ಆರೋಪಿ
ಎಫ್‌ಐಆರ್‌ನಲ್ಲಿ ಇರುವಂತೆಯೇ ನಟ ದರ್ಶನ್ ಅವರನ್ನು ಎರಡನೇ ಆರೋಪಿ ಮಾಡಲಾಗಿದೆ. ಪವಿತ್ರಾಗೌಡ ಮೊದಲ ಆರೋಪಿ ‌ಆಗಿದ್ದಾರೆ. ಉಳಿದ ಹದಿನೈದು ಆರೋಪಿಗಳ ಪಾತ್ರವನ್ನು ಉಲ್ಲೇಖಿಸಲಾಗಿದೆ ಎಂದು ಮೂಲಗಳು ಹೇಳಿವೆ. ಎಫ್‌ಎಸ್ಎಲ್ ವರದಿ, ಡಿಎನ್ಎ ವರದಿ, ಮರಣೋತ್ತರ ಪರೀಕ್ಷಾ ವರದಿ, ಸ್ಥಳ ಮಹಜರು, ಮೊಬೈಲ್ ದತ್ತಾಂಶದ ಮರು ಸಂಗ್ರಹ ಪ್ರಕ್ರಿಯೆಯಲ್ಲಿ ದೊರೆತ ಮಾಹಿತಿ ಎಲ್ಲವನ್ನೂ ಉಲ್ಲೇಖಿಸಲಾಗಿದೆ. ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಲಾಗಿದೆ.
ತನಿಖೆ ಬಾಕಿ ಇದೆ

ತನಿಖೆ ಇನ್ನೂ ಬಾಕಿಯಿದೆ. ಪ್ರಾಥಮಿಕ ದೋಷಾರೋಪ ಪಟ್ಟಿ ಇದು. ತನಿಖೆ ಪೂರ್ಣವಾದ ಬಳಿಕ ಮತ್ತೊಂದು ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಪೊಲೀಸರು ಹೇಳಿದರು.

ಸಾಕ್ಷಿದಾರರ ವಿವರ

ಪ್ರತ್ಯಕ್ಷ ಸಾಕ್ಷಿದಾರರು - 3

164 ಹೇಳಿಕೆ - 27 ಮಂದಿ

ಪಂಚನಾಮೆ ವಿವರ- 59

ಇತರೆ ಸರ್ಕಾರಿ ಅಧಿಕಾರಿಗಳು ಹೇಳಿಕೆ - 8

ಪೊಲೀಸರು – 56

ಒಟ್ಟು ಸಾಕ್ಷ್ಯಗಳ ವಿವರ – 231

ಪ್ರಮುಖಾಂಶಗಳು

17 ಆರೋಪಿಗಳ ಬಂಧನ

3991 ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ

7 ಸಂಪುಟ

10 ಕಡತಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.