ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು, ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ಬಳಿಕ ಗೌರವ ವಂದನೆ ಸ್ವೀಕರಿಸಿದ ರಾಜ್ಯಪಾಲ ಥಾವರಚಂದ್ ಗೆಹಲೋತ್, ಜನರನ್ನು ಉದ್ದೇಶಿಸಿ ಮಾತನಾಡಿದರು.
ಇದಾದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.
ಇದನ್ನೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಪಾಲರನ್ನು ಬರಮಾಡಿಕೊಂಡರು.
74ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನಾಡಿನ ಜನೆತೆಗೆ ಮುಖ್ಯಮಂತ್ರಿ ಬೊಮ್ಮಾಯಿ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.