ADVERTISEMENT

ರಾಜ್ಯ ವಿದ್ಯಾರ್ಥಿಗಳಿಗೆ ಶೇ 25 ಮೀಸಲು

ರಾಷ್ಟ್ರೀಯ ಕಾನೂನು ವಿದ್ಯಾಲಯಕ್ಕೆ ಪ್ರವೇಶ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2020, 20:10 IST
Last Updated 19 ಮಾರ್ಚ್ 2020, 20:10 IST
   

ಬೆಂಗಳೂರು: ರಾಜ್ಯದಲ್ಲಿ 10 ವರ್ಷ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕಾನೂನು ವಿದ್ಯಾಲಯದ ಕೋರ್ಸುಗಳ ಪ್ರವೇಶದಲ್ಲಿ ಶೇ 25 ರಷ್ಟು ಮೀಸಲಾತಿ ನೀಡುವ ಮಸೂದೆಗೆ ವಿಧಾನಸಭೆ ಒಪ್ಪಿಗೆ ನೀಡಿತು.

ವಿಧಾನಪರಿಷತ್ತಿನಲ್ಲಿ ಇದಕ್ಕೆ ಒಪ್ಪಿಗೆ ಪಡೆದು ರಾಜ್ಯಪಾಲರ ಅಂಗೀಕಾರಕ್ಕಾಗಿ ತಕ್ಷಣವೇ ಮಸೂದೆ ಕಳುಹಿಸಲಾಗುವುದು. ಅವರ ಅಂಗೀಕಾರ ಸಿಕ್ಕಿದ ತಕ್ಷಣವೇ, ಸಾಧ್ಯವಾದರೆ ಈ ವರ್ಷವೇ ಮೀಸಲು ಜಾರಿಗೆ ಮಾಡಲು ಉದ್ದೇಶಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ ನೀಡಿದರು.

‘ಈ ವಿದ್ಯಾಲಯದ ಸ್ಥಾಪನೆಗೆ ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಿದೆ. ಪ್ರತಿ ವರ್ಷ ₹2 ಕೋಟಿ ಅನುದಾನ ನೀಡುತ್ತದೆ. ಆದರೆ, ರಾಜ್ಯದ ವಿದ್ಯಾರ್ಥಿಗಳಿಗೆ ಇಲ್ಲಿ ಪ್ರವೇಶ ಸಿಗುತ್ತಿಲ್ಲ. ಅಲ್ಲದೆ, ಪರಿಶಿಷ್ಟ ಜಾತಿ ಮತ್ತು ವರ್ಗಗಳ ವಿದ್ಯಾರ್ಥಿಗಳಿಗೆ ನೀಡ
ಬೇಕಾದ ಮೀಸಲಾತಿಯನ್ನೂ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಪ್ರವೇಶ ದೊರಕಿಸಿಕೊಡುವ ಉದ್ದೇಶ ಸರ್ಕಾರದ್ದು’ ಎಂದು ಮಾಧುಸ್ವಾಮಿ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.