ADVERTISEMENT

‘ಡೀಮ್ಡ್‌ ವಿವಿಗಳಲ್ಲಿ ಕನ್ನಡಿಗರಿಗೆ ಸೀಟು ಮೀಸಲು’

​ಪ್ರಜಾವಾಣಿ ವಾರ್ತೆ
Published 14 ಜುಲೈ 2018, 17:57 IST
Last Updated 14 ಜುಲೈ 2018, 17:57 IST

ಬೆಂಗಳೂರು: ‘ಡೀಮ್ಡ್‌ ವಿಶ್ವವಿದ್ಯಾಲಯಗಳಲ್ಲಿ ಓದುವ ಕನ್ನಡದ ವಿದ್ಯಾರ್ಥಿಗಳಿಗೆ ಪದವಿ (ಯು.ಜಿ) ಯಲ್ಲಿ ಶೇ 25 ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ 50ರಷ್ಟು ಸೀಟುಗಳನ್ನು ಮೀಸಲಿಡಲಾಗುತ್ತದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್‌ ಹೇಳಿದರು.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದರು. ‘ಕರ್ನಾಟಕದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡುವ ಕುರಿತು ಸಾಕಷ್ಟು ಚಿಂತನೆ ನಡೆಸಿ ಈ ನಿಲುವಿಗೆ ಬಂದಿದ್ದೇನೆ’ ಎಂದರು.

‘ವೈದ್ಯಕೀಯ ಕಾಲೇಜುಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘವನ್ನು ಸರ್ಕಾರದ ವತಿಯಿಂದ ಮಾಡುವ ಬಗ್ಗೆ ಯೋಚಿಸಲಾಗಿದೆ. ಇದರಿಂದ ವಿದೇಶದಲ್ಲಿರುವ ವೈದ್ಯರು ಹಾಗೂ ಸಾಧನೆ ಮಾಡಿರುವವರನ್ನು ಗುರುತಿಸಿ ಅವರ ಸೇವೆ ಪಡೆಯಲು ಅನುಕೂಲವಾಗಲಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.