ಬೆಂಗಳೂರು: ಅನ್ಯ ಇಲಾಖೆಗಳಿಗೆ ನಿಯೋಜನೆಗೊಂಡಿರುವ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳ ಸೇವೆಯನ್ನು ಇದೇ 31 ರೊಳಗೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಇಲಾಖಾ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.
ಇನ್ನು ಮುಂದೆ ಪಶುಸಂಗೋಪನೆ ಇಲಾಖೆಯಿಂದ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಅನ್ಯ ಇಲಾಖೆಗಳಿಗೆ ನಿಯೋಜನೆ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಅನ್ಯ ಇಲಾಖೆಗಳಿಗೆ ನಿಯೋಜನೆ ಮೇಲೆ ಹೋಗಿರುವುದರಿಂದ ಸಿಬ್ಬಂದಿ ಕೊರತೆ ಉಂಟಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಬರುತ್ತಿರುವ ರೈತರ ಕರೆಗಳನ್ನು ನಿರ್ವಹಿಸುವುದು ಸವಾ ಲಾಗಿದೆ. ಲಸಿಕಾ ಕಾರ್ಯದ ಪ್ರಗತಿಯೂ ಕುಂಠಿತವಾಗಿದೆ ಎಂದು ಹೇಳಿದ್ದಾರೆ.
ಅಧಿಕಾರಿ, ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳುವ ಸಂಬಂಧ ಮುಖ್ಯಮಂತ್ರಿ ಯವರೂ ಒಪ್ಪಿಗೆ ನೀಡಿದ್ದಾರೆ. ಅರಣ್ಯ ಇಲಾಖೆ, ಪಶುವೈದ್ಯಕೀಯ ಮಹಾ ವಿದ್ಯಾಲಯ, ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ, ಬಿಬಿಎಂಪಿ ಮತ್ತು ಪಶು ಪಾಲನಾ ಅಧೀನದಲ್ಲಿನ ನಿಗಮ, ಮಂಡಳಿಗಳಲ್ಲಿ ಗುರುತುಪಡಿಸಿದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುಪಾಲನಾ ಇಲಾಖೆಯ ವಿವಿಧ ವೃಂದದ ಪಶುವೈದ್ಯಾಧಿಕಾರಿಗಳನ್ನು ಹಾಗೂ ಸಿಬ್ಬಂದಿ ಹೊರತುಪಡಿಸಿ ಉಳಿದ ಎಲ್ಲರ ಸೇವೆಯನ್ನು ಹಿಂಪಡೆ ಯಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.