ಬೆಂಗಳೂರು: ಏಳನೇ ವೇತನ ಆಯೋಗದ ಶಿಫಾರಸಿನಂತೆ ಪರಿಷ್ಕೃತ ವೇತನದ ಆರ್ಥಿಕ ಸೌಲಭ್ಯಗಳನ್ನು 2022ರ ಜುಲೈನಿಂದಲೇ ನೀಡಬೇಕು ಎಂದು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಒತ್ತಾಯಿಸಿದೆ.
ಪರಿಷ್ಕೃತ ವೇತನ ಆ.1ರಿಂದ ಜಾರಿಯಾಗಿದೆ. 2022 ಜುಲೈ 1ರಿಂದಲೇ ಪೂರ್ವಾನ್ವಯವಾಗುತ್ತದೆ. ಅಲ್ಲಿಂದಲೇ ನಿವೃತ್ತರಿಗೂ ವೇತನ ನಿಗದಿ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿತ್ತು. ಹಾಗಾಗಿ, ಜುಲೈ 31, 2024ರವರೆಗೂ ನಿವೃತ್ತರಾದ ನೌಕರರಿಗೆ ಎಲ್ಲ ಆರ್ಥಿಕ ಸೌಲಭ್ಯ ಒದಗಿಸಬೇಕು ಎಂದು ಸಂಘದ ಅಧ್ಯಕ್ಷ ಎಲ್. ಭೈರಪ್ಪ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿ ಹಾಗೂ ಆರ್ಥಿಕ ಇಲಾಖೆಗೆ ಈ ಕುರಿತು ಹಲವು ಬಾರಿ ಮನವಿ ಮಾಡಿದರೂ, ಇದುವರೆಗೂ ಆರ್ಥಿಕ ಸೌಲಭ್ಯ ನೀಡಲು ಕ್ರಮಕೈಗೊಂಡಿಲ್ಲ ಎಂದು ಅವರು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.